ಆನೇಕಲ್:ಕಾಂಗ್ರೆಸ್ ದುರಾಡಳಿತದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರು ಇಂದು ಭಜನೆ ಮಾಡುವ ಮುಖಾಂತರ ಆನೇಕಲ್ ಪುರಸಭೆ ಕಚೇರಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ. ಸೂಕ್ತ ಅನುದಾನ ಹಂಚಿಕೆ ಮಾಡದ ಹಿನ್ನೆಲೆಯಲ್ಲಿ ಸಭಾಂಗಣದಲ್ಲಿ ಭಜನೆ ಮಾಡಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ..
ಇತ್ತೀಚಿಗೆ ಆನೇಕಲ್ ಪುರಸಭೆಯಲ್ಲಿ ಕಾಂಗ್ರೆಸ್ ಅಧಿಕಾರಿಗಳ ಕಾರ್ಯವೈಕರಿ ಬಗ್ಗೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರು ಅಧ್ಯಕ್ಷರ ಮುಂದೆ ಕುಳಿತು ಭಜನೆ ಮಾಡಿದರು. ಈ ವೇಳೆ ಕಾಂಗ್ರೆಸ್ ಅಧ್ಯಕ್ಷ ಹಾಗೂ ಇಓ ವಿರುದ್ಧ ಬಿಜೆಪಿ ಸದಸ್ಯರು, ವಾರ್ಡ್‌ಗಳಲ್ಲಿ ಅಭಿವೃದ್ಧಿಗೆ ಕಾಂಗ್ರೆಸ್ ಅಡ್ಡಗಾಲು ಹಾಕುತ್ತಿದೆ ,ನಿಗದಿಗೆ ಗಿಂತ ಹೆಚ್ಚು ತೆರಿಗೆ ವಸೂಲಾತಿ, ಎರಡು ದಿನದ ಹಿಂದೆ ತೆರಿಗೆ ವಿಚಾರದಲ್ಲಿ ಲಂಚ ಪಡೆದ ಆರೋಪ. ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಪರೋಕ್ಷವಾಗಿ ಬೆಂಬಲ,ಸೇರಿದಂತೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ ಹೊರಹಾಕಿದ್ದಾರೆ.
ಇನ್ನು ಬಿಜೆಪಿ ಸದಸ್ಯರು ಪುರಸಭೆ ಮುಖ್ಯಾಧಿಕಾರಿಗಳ ಕಾರ್ಯವೈಖರಿ ವಿರುದ್ಧ ಕಿಡಿ ಕಾರಿದರು, ಇದರಿಂದ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಇದರ ಜೊತೆಗೆ ಹಲವು ದಿನಗಳಿಂದ ಬಾಕಿ ಉಳಿದಿರುವ ಕೆಲಸಗಳನ್ನ ಆದಷ್ಟು ಬೇಗ ಮುಗಿಸಿಕೊಡುವಂತೆ ಬಿಜೆಪಿ ಸದಸ್ಯರು ಆಗ್ರಹಿಸಿದರು.
Kshetra Samachara
22/01/2022 10:22 am