ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೊಡ್ಡಬಳ್ಳಾಪುರ : ಡಾ .ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ನ್ಯಾಯಾಧೀಶರಿಂದ ಅವಮಾನ ಖಂಡಿಸಿ ಪ್ರತಿಭಟನೆ..

ದೊಡ್ಡಬಳ್ಳಾಪುರ ; ರಾಯಚೂರಿನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ & ಸಂವಿಧಾನಕ್ಕೆ ಅವಮಾನ ಮಾಡಿದ ನ್ಯಾಯಾಧೀಶರ ವಿರುದ್ಧ ಸೂಕ್ತ ಕಾನೂನು ರೀತಿಯ ಕ್ರಮ ಜರುಗಿಸುವಂತೆ ಒತ್ತಾಯಿಸಿ ಸಂವಿಧಾನ ರಕ್ಷಣೆಗಾಗಿ ನಾಗರೀಕ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

73 ನೇ ಗಣರಾಜ್ಯೋತ್ಸವದ ಅಂಗವಾಗಿ ರಾಯಚೂರು ಕೋರ್ಟ್ ಆವರಣದಲ್ಲಿ ಸಂವಿಧಾನ ದಿನಾಚರಣೆ-ಗಣರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಫೋಟೋ ಇಟ್ಟರೆ ನಾನು ಕಾರ್ಯಕ್ರಮಕ್ಕೆ ಬರುವುದಿಲ್ಲ ಮತ್ತು ಧ್ವಜಾರೊಹಣ ಮಾಡುವುದಿಲ್ಲ ಎಂದು ಹೇಳಿದ ರಾಯಚೂರು ಜಿಲ್ಲಾ ನ್ಯಾಯಧೀಶರಾದ ಮಲ್ಲಿಕಾರ್ಜುನ್ ಗೌಡ ವಿರುದ್ದ ರಾಜ್ಯಾದ್ಯಂತ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿದೆ.

ಇದೇ ವಿಚಾರವಾಗಿ ಇಂದು ದೊಡ್ಡಬಳ್ಳಾಪುರದ ತಾಲ್ಲೂಕು ಕಚೇರಿ ಆವರಣದಲ್ಲಿ ಸಂವಿಧಾನ ರಕ್ಷಣೆಗಾಗಿ ನಾಗರೀಕ ವೇದಿಕೆ ವತಿಯಿಂದ ನ್ಯಾಯಾದೀಶ ಮಲ್ಲಿಕಾರ್ಜುನ ಗೌಡ ವಿರುದ್ದ ದಿಕ್ಕಾರ ಕೂಗಲಾಯಿತು, ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಪರ ಸಂಘಟನೆಯ ಮುಖಂಡರು ಸಂವಿಧಾನ ಓದಿ ನ್ಯಾಯಾದೀಶನಾದ ಮಲ್ಲಿಕಾರ್ಜುನ ಗೌಡ ಸಂವಿಧಾನ ರಚನೆ ಮಾಡಿದ ಮಹಾನ್ ವ್ಯಕ್ತಿಯ ಭಾವ ಚಿತ್ರವನ್ನ ಗಣರಾಜ್ಯದ ದಿನವೇ ತೆರವು ಗೊಳಿಸುವ ಮೂಲಕ ದೇಶ ದ್ರೋಹದ ಕೆಲಸ ಮಾಡಿದ್ದಾರೆ ಇಂಥಹ ಅಮಾನವೀಯ ಘಟನೆಯನ್ನ ತೀವ್ರ ಖಂಡಿಸುತ್ತೇವೆ ಎಂದರು.

ದೊಡ್ಡಬಳ್ಳಾಪುರದ ತಹಶೀಲ್ದಾರ್ ಮೋಹನಕುಮಾರಿ ಯವರ ಮುಖಾಂತರ ರಾಜ್ಯ ಪಾಲರಿಗೆ ಮನವಿ ಸಲ್ಲಿಸಿ ನ್ಯಾಯಾಧೀಶರಿಗೆ ನೀಡಿದ ಸರ್ಕಾರಿ ಸವಲತ್ತುಗಳನ್ನ ಕೂಡಲೆ ಹಿಂಪಡೆದು ಅವರನ್ನ ಸೇವೆಯಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದರು ಮತ್ತು ಕೂಡಲೆ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಅವರು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ತಾಲ್ಲೂಕಿನ ವಿವಿಧ ದಲಿತಪರ ಸಂಘಟನೆಗಳ ಮುಖಂಡರು,ಪದಾಧಿಕಾರಿಗಳು ಮುಂತಾದವರು ಭಾಗಿಯಾಗಿದ್ದರು.

Edited By : Nagesh Gaonkar
Kshetra Samachara

Kshetra Samachara

27/01/2022 10:06 pm

Cinque Terre

746

Cinque Terre

0

ಸಂಬಂಧಿತ ಸುದ್ದಿ