ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ನೀಡದಿದ್ದಕ್ಕೆ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಗ್ರಾಮಾಂತರದ ಹೊಸಕೋಟೆಯ ಕಾರ್ಯಕ್ರಮವೊಂದರಲ್ಲಿ ಅವರು ಭಾಗವಹಿಸಿ ಮಾತನಾಡಿದರು.
ಬೆಂಗಳೂರು ಗ್ರಾಮಾಂತರದ ಬದಲಿಗೆ ಚಿಕ್ಕಬಳ್ಳಾಪುರ ಉಸ್ತುವಾರಿ ನೀಡಲಾಗಿದೆ. ಗ್ರಾಮಾಂತರ ಭಾಗದಲ್ಲಿ ಪಕ್ಷ ಸಂಘಟನೆಗಾಗಿ ಉಸ್ತುವಾರಿ ನೀಡುವಂತೆ ಮುಖ್ಯಮಂತ್ರಿಗಳ ಬಳಿ ಚರ್ಚಿಸಿರುವುದಾಗಿ ತಿಳಿಸಿದರು. ಮುಖ್ಯಮಂತ್ರಿಗಳು ಹೈಕಮಾಂಡ್ ಜೊತೆ ಚರ್ಚಿಸಿ ತಿಳಿಸುವುದಾಗಿ ಹೇಳಿದ್ದಾರೆ ಎಂದರು.
Kshetra Samachara
30/01/2022 06:28 pm