ಹೊಸಕೋಟೆ: ಕೇಂದ್ರ ಬಜೆಟ್ ನಲ್ಲಿ ಪ್ರತಿ ಬಾರಿಯೂ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ತಿಳಿಸಿದ್ದಾರೆ. ಹೊಸಕೋಟೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಸಿ.ಎಂ. ಇಬ್ರಾಹಿಂ ಅವರನ್ನು ಪುನಃ ಕಾಂಗ್ರೆಸ್ ಸೇರ್ಪಡೆಗೆ ಪಕ್ಷದ ವರಿಷ್ಠರು ಚರ್ಚಿಸುತ್ತಿದ್ದಾರೆ. ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆ ಕುರಿತು ಊಹಾಪೋಹ ನಡೆಯುತ್ತಿವೆ. ಈಗಾಗಲೇ ತಾವು, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಬೆಂಬಲ ಸೂಚಿಸಿರುವುದಾಗಿ ತಿಳಿಸಿದರು.
ಚುನಾವಣೆಗೆ ಇನ್ನೂ ಒಂದೂವರೆ ವರ್ಷ ಇರುವ ಕಾರಣ ಸದ್ಯಕ್ಕೆ ತಾಲೂಕಿನ ಅಭಿವೃದ್ಧಿ ಕಡೆ ಗಮನ ಹರಿಸಲಾಗುತ್ತಿದ್ದು, ನಾಳೆ ಕೇಂದ್ರ ಸರಕಾರ ಬಜೆಟ್ ಮಂಡನೆ ಮಾಡಲಿದೆ. ಈ ಬಾರಿಯಾದರೂ ರಾಜ್ಯಕ್ಕೆ ಏನಾದರೂ ಕೊಡುಗೆ ನೀಡುತ್ತಾರೋ ನೋಡಬೇಕಿದೆ. ಈಗಾಗಲೇ ರಾಜ್ಯಕ್ಕೆ ನೀಡುವ ಅನುದಾನದಲ್ಲಿ ತಾರತಮ್ಯ ಮಾಡುತ್ತಲೇ ಬರುತ್ತಿದೆ. ಈ ಬಾರಿ ಬಜೆಟ್ ನಲ್ಲಿ ರಾಜ್ಯಕ್ಕೆ ಸೂಕ್ತ ಅನುದಾನ ಕಲ್ಪಿಸಿ ಎಂದರು.
Kshetra Samachara
31/01/2022 04:37 pm