ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇವನಹಳ್ಳಿ: KPCC ಕಾರ್ಯಾಗಾರದಲ್ಲಿ ಗಲಾಟೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ KPCC ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಗಲಾಟೆ ನಡೆದಿದೆ.

ದೇವನಹಳ್ಳಿಯ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲೂಕುಗಳ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭಾಗಿಯಾಗಿದ್ದರು.

ಮಾಜಿ ಶಾಸಕರುಗಳು, ಮಾಜಿ MP.ಗಳು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲೂಕು ಕಾಂಗ್ರೆಸ್ ನಾಯಕರ ಹೆಸರುಗಳನ್ನು ಕರೆದಿಲ್ಲ ಎನ್ನುವ ಕಾರಣಕ್ಕೆ ಕಾರ್ಯಕರ್ತರು ಗಲಾಟೆ ನಡೆಸಿದ್ದಾರೆ.ಇದು ಕಾರ್ಯಕ್ರಮದ ಕಪ್ಪುಚುಕ್ಕೆ.

ತೆಲಂಗಾಣ ರಾಜ್ಯದಲ್ಲಿ 50 ಲಕ್ಷ ಡಿಜಿಟಲ್ ನೋಂದಣಿ ಮಾಡಿದ್ದಾರೆ. ಕರ್ನಾಟಕದಲ್ಲಿ ಒಂದು ಕೋಟಿ ಸದಸ್ಯರ ನೋಂದಣಿ ಮಾಡಬೇಕೆಂದು ನಾಯಕರು ಕಾರ್ಯಕರ್ತರಿಗೆ ಕರೆ ನೀಡಿದರು.

Edited By : Manjunath H D
Kshetra Samachara

Kshetra Samachara

07/02/2022 08:19 pm

Cinque Terre

1.55 K

Cinque Terre

0

ಸಂಬಂಧಿತ ಸುದ್ದಿ