ಬೆಂಗಳೂರು: ಗಣರಾಜ್ಯೋತ್ಸವ ದಿನದಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿ ಸಂವಿಧಾನಕ್ಕೆ ಅವಮಾನ ಮಾಡಿದ್ದ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ಫೆಬ್ರವರಿ 19 ರಂದು ವಿಧಾನಸೌಧ ಹಾಗೂ ಹೈಕೋರ್ಟ್ ಚಲೋ ಚಳುವಳಿ ಹಮ್ಮಿಕೊಂಡಿವೆ.
ಕೆ.ಆರ್.ಪುರದ ತಾಲೂಕು ಕಚೇರಿಯ ಅಂಬೇಡ್ಕರ್ ಪ್ರತಿಮೆ ಬಳಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕರ್ನಾಟಕ ರಿಪಬ್ಲಿಕ್ ಸೇನೆಯ ರಾಜ್ಯಾಧ್ಯಕ್ಷ ಜಿಗಣಿ ಶಂಕರ್ ಅವರು, ಬೆಂಗಳೂರಿನಲ್ಲಿ ನಡೆಯುವ ಐತಿಹಾಸಿಕ Rally ಗೆ ರಾಜ್ಯದ ಮೂಲೆ ಮೂಲೆಗಳಿಂದ ಅಂಬೇಡ್ಕರ್ ಅವರ ಅನುಯಾಯಿಗಳು ಆಗಮಿಸಲಿದ್ದು, ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ನ್ಯಾಯಾಧೀಶರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಲಾಗುವುದು.
ಕೆ.ಆರ್.ಪುರದಿಂದ ಹತ್ತು ಸಾವಿರ ಜನ ಸೇರಲಿದ್ದು, ಹೋರಾಟದಲ್ಲಿ ಪ್ರತಿಯೊಬ್ಬರೂ ನೀಲಿ ಶಾಲು, ಭಾವುಟ ಹಾಗೂ ಅಂಬೇಡ್ಕರ್ ಭಾವಚಿತ್ರವನ್ನು ಹಿಡಿಯಲಿದ್ದಾರೆ. ಈ ಐತಿಹಾಸಿಕ ಹೋರಾಟದಲ್ಲಿ ಜೈಲಿಗೆ ಹೋಗಲು ಸಿದ್ದ ಎಂದು ತಿಳಿಸಿದ್ರು.
PublicNext
16/02/2022 07:56 am