ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರಾಷ್ಟ್ರಧ್ವಜಕ್ಕೆ ಅಪಮಾನ ಕೈ ನಾಯಕರಿಂದ ಪ್ರತಿಭಟನೆ..!!

ಆನೇಕಲ್: ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಾಡಲಿದೆ ಎಂಬ ಹೇಳಿಕೆ ನೀಡುವುದರ ಮೂಲಕ ಸಚಿವ ಕೆ ಎಸ್ ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ ಹೀಗಾಗಿ ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರುಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಇನ್ನು ಪ್ರತಿಭಟನೆ ಆನೇಕಲ್ ಅಂಬೇಡ್ಕರ್ ಸರ್ಕಲ್ ನಿಂದ ಹಿಡಿದು ಆನೇಕಲ್ ತಾಲ್ಲೂಕು ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ಮಾಡಿ ಸಚಿವ ಈಶ್ವರಪ್ಪ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಇನ್ನು ಕಾಂಗ್ರೆಸ್ ಪ್ರತಿಭಟನೆ ರ್ಯಾಲಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ ವಿಶೇಷ ತಹಶಿಲ್ದಾರ್ ರಿಗೆ ಮನವಿ ಪತ್ರವನ್ನು ನೀಡಿ ರಾಜ್ಯಪಾಲರಿಗೆ ಗಮನಕ್ಕೆ ತರುವಂತೆ ಆಗ್ರಹ ಮಾಡಿದ್ದಾರೆ.

ದೇಶದ್ರೋಹಿ ಹೇಳಿಕೆ ನೀಡಿರುವ ಸಚಿವ ಈಶ್ವರಪ್ಪರನ್ನು ಬಂಧಿಸಿ ಕ್ರಮ ಜರುಗಿಸಬೇಕು ಬಿಜೆಪಿ ಸರ್ಕಾರ ಸಚಿವ ಸ್ಥಾನದಿಂದ ವಜಾ ಮಾಡಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದರು.

Edited By : Manjunath H D
Kshetra Samachara

Kshetra Samachara

21/02/2022 05:06 pm

Cinque Terre

1.15 K

Cinque Terre

0

ಸಂಬಂಧಿತ ಸುದ್ದಿ