ಬೆಂಗಳೂರು: ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಾಡಲಿದೆ ಎಂದ ಸಚಿವ ಕೆಎಸ್ ಈಶ್ವರಪ್ಪ ಹೇಳಿಕೆ ಖಂಡಿಸಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಗೊಟ್ಟಿಗೆರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.
ಗೊಟ್ಟಿಗೆರೆ ಸರ್ಕಲ್ ನಲ್ಲಿ ಕಪ್ಪುಪಟ್ಟಿ ಧರಿಸಿ ಕೆಎಸ್ ಈಶ್ವರಪ್ಪ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಕಾಂಗ್ರೆಸ್ ಮುಖಂಡ ಆರ್ ಕೆ ರಮೇಶ್ ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರು ಇತರ ಬೇಜವಾಬ್ದಾರಿ ಹೇಳಿಕೆ ಕೊಡುವುದು ಸರಿಯಲ್ಲ.
ಪ್ರಮಾಣ ವಚನ ಸ್ವೀಕಾರ ಮಾಡುವಾಗ ಸಂವಿಧಾನಕ್ಕೆ ರಾಷ್ಟ್ರಧ್ವಜಕ್ಕೆ ಯಾವುದೇ ಕಾರಣಕ್ಕೂ ಅಪಮಾನ ಮಾಡುವುದಿಲ್ಲ ಎಂದು ಪ್ರಮಾಣ ಮಾಡುತ್ತಾರೆ.
ಈಗ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವುದು ಸರಿಯಲ್ಲ ಎಂದು ದ್ಧ ಆರ್ ಕೆ ರಮೇಶ್ ಕಿಡಿಕಾರಿದರು..
Kshetra Samachara
21/02/2022 05:21 pm