ದೊಡ್ಡಬಳ್ಳಾಪುರ : ಶಿವಮೊಗ್ಗದಲ್ಲಿ ನಡೆದ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಖಂಡಿಸಿ ನಗರದ ಡಿಕ್ರಾಸ್ ರಸ್ತೆಯಲ್ಲಿ ಹೆದ್ದಾರಿ ತಡೆದ ಬಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬಜರಂಗದಳ ಮತ್ತು ಹಿಂದೂ ಜಾಗರಣ ವೇದಿಕೆ ಸದಸ್ಯರು ಹರ್ಷ ಕೊಲೆಯನ್ನ ಖಂಡಿಸಿದರು. ಇದೇ ವೇಳೆ ಮಾತನಾಡಿದ ಬಜರಂಗದಳ ಬೆಂಗಳೂರು ವಿಭಾಗದ ಸಂಯೋಜಕ ಗೋವರ್ಧನ್ ಸಿಂಗ್ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಂದೂ ಕಾರ್ಯಕರ್ತರ ಕೊಲೆ ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ, ಜಿಹಾದಿ ಹತ್ಯೆಕೋರರ ಎನ್ ಕೌಂಟರ್ ಮಾಡಬೇಕು, ಹರ್ಷ ಕೊಲೆ ಪ್ರಕರಣವನ್ನ ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಿಂದ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸವಾರರಿಗೆ ತೊಂದರೆಯಾಗಿತು, ಸ್ಥಳದಲ್ಲಿಯೇ ಇದ್ದ ಪೊಲೀಸರು ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
Kshetra Samachara
22/02/2022 09:50 am