ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಗರದಲ್ಲಿ ಧರಣಿ ಮಾಡಿದರು.
ವಿವಿಧ ಜಿಲ್ಲೆಯಿಂದ ಆಗಮಿಸಿದ ನೂರಾರು ಕಾರ್ಯಕರ್ತೆಯರು ವಿಧಾನ ಸಭೆಗೆ ಮುತ್ತಿಗೆ ಹಾಕಲು ಮುಂದಾದರು. ನಿನ್ನೆಯಿಂದ ಧರಣಿ ನಡೆಸುತ್ತಿರುವ ಇವರ ಮನವೊಲಿಕೆಗೆ ಪೊಲೀಸರು ಮುಂದಾಗಿದ್ದಾರೆ.
ಆದರೆ ಅಂಗನವಾಡಿ ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ. ಈ ಸಂಬಂಧ ಬಿಗಿ ಪೊಲೀಸ್ ಬಂದೋಬಸ್ತು ಮಾಡಿಕೊಳ್ಳ ಲಾಗಿದೆ. ನಗರದ ಫ್ರೀಡಂ ಪಾರ್ಕ್ ನಲ್ಲಿ ಎಲ್ಲರೂ ಜಮಾವಣೆ ಗೊಂಡಿದ್ದಾರೆ.
Kshetra Samachara
22/02/2022 01:30 pm