ಬೆಂಗಳೂರು: ಕಟ್ಟಾ ಹಿಂದೂವಾದಿ ಎಂದು ಗುರುತಿಸಿಕೊಂಡಿದ್ದ ಹರ್ಷ ಹತ್ಯೆಗೆ ರಾಜ್ಯಾದ್ಯಂತ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು,ಅದೇ ರೀತಿ ಕೆಆರ್ ಪುರದಲ್ಲೂ ಹತ್ಯೆಗೈದವರನ್ನು ಆದಷ್ಟೂ ಬೇಗ ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿ ಬಿಬಿಎಂಪಿ ಕಚೇರಿಯ ಎದುರು ಬಿಜೆಪಿಯ ನೂರಾರು ಮುಖಂಡರು ಮೇಣದ ಬತ್ತಿ ಹಿಡಿದು ಶ್ರದ್ಧಾಂಜಲಿ ಸಲ್ಲಿಸಿದರು.
ಬಳಿಕ ಮಾತನಾಡಿದ ಮಾಜಿ ಪಾಲಿಕೆ ಸದಸ್ಯ ಎಂ.ಎನ್.ಶ್ರೀಕಾಂತ್ ಗೌಡ, "ಹರ್ಷನನ್ನು ಹತ್ಯೆಗೈದ ಆರೋಪಿಗಳನ್ನು ಆದಷ್ಟೂ ಬೇಗ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು".ಮುಂದೆ ಈ ರೀತಿಯ ಕೃತ್ಯಗಳು ನಡೆಯದಂತೆ ಸರ್ಕಾರ ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ ಆರೋಪಿಗಳಿಗೆ ಶಿಕ್ಷೆಗೆ ಗುರಿಪಡಿಸುವಂತೆ ಆಗ್ರಹಿಸಿದರು.ಈ ಸಂದರ್ಭ ಮಾಜಿ ಪಾಲಿಕೆ ಸದಸ್ಯರಾದ ಜಯಪ್ರಕಾಶ್, ಅಂತೋನಿಸ್ವಾಮಿ ಉಪಸ್ಥಿತರಿದ್ದರು.
Kshetra Samachara
22/02/2022 09:54 pm