ಬೆಂಗಳೂರು: ಡಿಕೆಶಿ ನೇತೃತ್ವದಲ್ಲಿ ನಡೆಯುತ್ತಿರುವ 'ನೀರಿಗಾಗಿ ನಡಿಗೆ' ಕಾಂಗ್ರೆಸ್ ಮೇಕೆದಾಟು ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ಮೇಕೆದಾಟು ನಿಂದ ಹೊರಟಿದ್ದ ಪಾದಯಾತ್ರೆ 2.0 ಇಂದು ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಸಾಗಿತು. ಈ ವೇಳೆ ಪಬ್ಲಿಕ್ ನೆಕ್ಸ್ಟ್ ಜತೆ ಕಾಂಗ್ರೆಸ್ ಶಾಸಕ ಕೃಷ್ಣ ಭೈರೇಗೌಡ ಮಾತನಾಡಿದ್ರು. ಬಿಜೆಪಿ ನಾಯಕರು ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಲೇವಡಿ ಮಾಡಿದ್ದರು. ಹೀಗಾಗಿ ಬಿಜೆಪಿ ಬೆಂಕಿ ಹಚ್ಚುವ ಕೆಲಸ ಮಾಡುತ್ತದೆ. ನಾವು ನೀರಿಗಾಗಿ ಹೋರಾಡುತ್ತಿದ್ದೇವೆ ಎಂದು ಬಿಜೆಪಿಗೆ ಚಾಟಿ ಬೀಸಿದರು.
ಬೈಟ್:ಕೃಷ್ಣ ಭೈರೇಗೌಡ
PublicNext
01/03/2022 10:38 pm