ಬೆಂಗಳೂರು: ಇಂದಿನ ಬೆಲೆ ಏರಿಕೆಯ ಪರಿಸ್ಥಿತಿಯಲ್ಲಿ ಕೇವಲ 1 ಸಾವಿರ ಗೌರವಧನ ಹೆಚ್ಚಳ ಮಾಡಿರುವುದು ತೃಪ್ತಿ ತಂದಿಲ್ಲ ಅಂತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ನಾಗಲಕ್ಷ್ಮಿ ಹೇಳಿದ್ದಾರೆ.
ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಕೋವಿಡ್ ಸಮಯದಲ್ಲಿ ಆರೋಗ್ಯ ಇಲಾಖೆಯ ಆಧಾರ ಸ್ತಂಭವಾಗಿ ನಿಂತಿದ್ದು ಆಶಾ ಕಾರ್ಯಕರ್ತೆಯರು. ರಾಜ್ಯದಲ್ಲಿ ಸುಮಾರು 42 ಸಾವಿರ ಆಶಾ ಕಾರ್ಯಕರ್ತೆಯರು ಇದ್ದು, ಗೌರವಧನ ಹೆಚ್ಚಳ ಮಾಡಿರುವುದನ್ನ ಸ್ವಾಗತ ಮಾಡುತ್ತೇವೆ ಎಂದರು.
ಕಳೆದ ಮೂರು ವರ್ಷಗಳಿಂದ ಕೋವಿಡ್ ವಿರುದ್ಧದ ಹೋರಾಟದಲ್ಲಿ ಪ್ರಾಣ ಪಣಕ್ಕಿಟ್ಟು ಕೆಲಸ ಮಾಡಿದ್ದೇವೆ. ಆದರೆ, ಕೇವಲ ಒಂದು ಸಾವಿರ ರೂ. ಗೌರವ ಧನ ನೀಡಿರುವುದು ಸರಿಯಲ್ಲ. ಮಾಡಿದ ಕೆಲಸಕ್ಕೆ ತಕ್ಕ ಪ್ರತಿಫಲ ಸಿಗುವ ನಿರೀಕ್ಷೆಯನ್ನ ಈ ಸಲದ ಬಜೆಟ್ನಲ್ಲಿ ಇಟ್ಟುಕೊಂಡಿದ್ದೆವು. ಕಳೆದ ಮೂರು ವರ್ಷದಿಂದ ಗೌರವ ಧನ ಹೆಚ್ಚಳವಾಗಿಲ್ಲ. ಇವರ ಸೇವೆ ಗುರುತಿಸಿ ಗೌರವ ಧನ ಹೆಚ್ಚಳ ಮಾಡುವಂತೆ ಒತ್ತಾಯಿಸಿದರು.
PublicNext
04/03/2022 07:13 pm