ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: 'ಉಕ್ರೇನ್‌ನಲ್ಲಿರುವ ಭಾರತೀಯರ ರಕ್ಷಣೆಯ ಹೊಣೆ ಕೇಂದ್ರ ಸರ್ಕಾರದ್ದು'

ದೊಡ್ಡಬಳ್ಳಾಪುರ: ಉಕ್ರೇನ್‌ನಲ್ಲಿರುವ ಭಾರತೀಯರ ರಕ್ಷಣೆಯ ಹೊಣೆ ಕೇಂದ್ರ ಸರ್ಕಾರದ್ದು, ಪ್ರತಿಯೊಬ್ಬ ಭಾರತೀಯರನ್ನು ಕರೆಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಕೇಂದ್ರ ಸರ್ಕಾರ ಮಾಡಬೇಕು ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಒತ್ತಾಯಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಿಹಳ್ಳಿಯಲ್ಲಿ ಬಂಜಾರ ನೌಕರರ ಮತ್ತು ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ 283ನೇ ವರ್ಷದ ಸೇವಾಲಾಲ್ ಜಯಂತ್ಯುತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಅವರು, ನಮ್ಮ ಕೇಂದ್ರ ಸರ್ಕಾರ ಉಕ್ರೇನ್‌ನಲ್ಲಿರುವ ಮಕ್ಕಳನ್ನು ವಾಪಸ್ ಕರೆಸಿಕೊಳ್ಳಲು ಅಲಕ್ಷ್ಯ ಮಾಡಿತ್ತು, ನಿಮ್ಮದೆ ಹಣದಲ್ಲಿ ಗಡಿಗೆ ಬರುವಂತೆ ಹೇಳಿತ್ತು. ಇದರಿಂದ ವಿದ್ಯಾರ್ಥಿಗಳು ಗಡಿಭಾಗಕ್ಕೆ ನಡೆದುಕೊಂಡ ಬಂದಿದ್ದಾರೆ ಎಂದರು.

ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧದಿಂದ ನಮ್ಮ ರಾಜ್ಯದ ವಿದ್ಯಾರ್ಥಿ ಸಾವನ್ನಪ್ಪಿದ್ದು, ನಾಲ್ವರು ವಿದ್ಯಾರ್ಥಿನಿಯರನ್ನು ಅಪಹರಿಸಲಾಗಿದೆ. ಇದರ ಹೊಣೆಯನ್ನ ಕೇಂದ್ರ ಸರ್ಕಾರ ಹೊರಬೇಕಿದೆ. ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳ ರಕ್ಷಣೆ ಜವಾಬ್ದಾರಿ ಕೇಂದ್ರ ಸರ್ಕಾರದ್ದು ಎಂದರು.

Edited By : Nagesh Gaonkar
Kshetra Samachara

Kshetra Samachara

04/03/2022 11:07 pm

Cinque Terre

2.26 K

Cinque Terre

0

ಸಂಬಂಧಿತ ಸುದ್ದಿ