ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸುಮಾರು 2 ಸಾವಿರ ಅಂಗನವಾಡಿ ಕಾರ್ಯಕರ್ತರು ನಡೆಸುತ್ತಿದ್ದ ಹೋರಾಟ ಅಂತ್ಯಗೊಂಡಿದೆ.
ಅಂಗನವಾಡಿ ನೌಕರರ ಪ್ರತಿಭಟನೆಯನ್ನು ಸದ್ಯಕ್ಕೆ ವಾಪಸ್ ಪಡೆಯಲಾಗಿದೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ನಿರ್ಧರಿಸಿದೆ.
ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಯಕರ್ತರು ಅಂಗನವಾಡಿ ಕೇಂದ್ರಗಳನ್ನು ಅನಿರ್ದಿಷ್ಟ ಕಾಲ ಬಂದ್ ಮಾಡಿ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಬಜೆಟ್ನಲ್ಲಿ ಸಿಎಂ ಬೊಮ್ಮಾಯಿ 1000 ರೂ. ಹೆಚ್ಚಿಸಿದರೂ ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಂಬಂಧಪಟ್ಟ ಸಚಿವರು ಮಧ್ಯ ಪ್ರವೇಶಿಸಿ ಅನುಕಂಪದ ಆಧಾರದ ಮೇಲೆ ಮಗಳು ಮತ್ತು ಸೊಸೆಗೆ ಕೆಲಸ ಕೊಡಲು ಆದೇಶಿಸಿದ್ದಾರೆ. ಅಲ್ಲದೆ, ಕೋಳಿ ಮೊಟ್ಟೆ ಹಣವನ್ನು ಮುಂಗಡವಾಗಿ ಕೊಡಲು ಸರ್ಕಾರ ಒಪ್ಪಿದೆ ಎಂದು ಪದಾಧಿಕಾರಿ ವರಲಕ್ಷ್ಮಿ ಮಾಹಿತಿ ನೀಡಿದ್ದಾರೆ.
PublicNext
06/03/2022 10:10 pm