ಬೆಂಗಳೂರು : ಸಮವಸ್ತ್ರದ ಕುರಿತು ನ್ಯಾಯಾಲಯ ಒಳ್ಳೆಯ ತೀರ್ಪು ನೀಡಿದೆ. ಇದು ಮಕ್ಕಳ ಭವಿಷ್ಯ ಮತ್ತು ಶಿಕ್ಷಣದ ಪ್ರಶ್ನೆ, ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದಿಲ್ಲ, ನ್ಯಾಯಾಲಯದ ಈ ಆದೇಶವನ್ನು ಎಲ್ಲರು ಪಾಲಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯದಲ್ಲಿಯ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಶಾಲಾ ಕಾಲೇಜುಗಳಿಗೆ ಹಿಜಾಬ್ ಧರಿಸಿ ಬರದಂತೆ ಐತಿಹಾಸಿಕ ತೀರ್ಪು ಪ್ರಕಟಿಸಿದ ಹೈಕೋರ್ಟ್ ಆದೇಶದ ಬೆನ್ನಲ್ಲೇ ಸಿಎಂ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.
ಎಲ್ಲರು ಸಹಕಾರ ಕೊಟ್ಟು ಶಾಂತಿ ಸೌಹಾರ್ದತೆ ಕಾಪಾಡಬೇಕು.ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಈ ತೀರ್ಪನ್ನು ಒಪ್ಪಿಕೊಳ್ಳಬೇಕು.ತೀರ್ಪಿನ ಅನ್ವಯ ಶಿಕ್ಷಣ ಕೂಡಲು ಎಲ್ಲರು ಸಹಕಾರ ಕೊಡಬೇಕು. ಎಲ್ಲ ವಿದ್ಯಾರ್ಥಿಗಳು ಹೈಕೋರ್ಟ್ ಆದೇಶ ಪಾಲನೆ ಮಾಡಬೇಕು.ತರಗತಿ ಬಹಿಷ್ಕಾರ ಮಾಡದೆ, ಪರೀಕ್ಷೆ ಯಲ್ಲಿ ಭಾಗವಹಿಸಬೇಕು. ಈಗಾಗಲೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಟ್ಟು ನಿಟ್ಟಾಗಿ ಮಾಡಿದ್ದೇವೆ
ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಗೃಹ ಇಲಾಖೆಯಿಂದ ತಕ್ಕ ಪಾಠ ಆಗಲಿದೆ ಎಂದು ಕಾನೂನು ಕದಡುವವರಿಗೆ ಸಿಎಂ ಎಚ್ಚರಿಕೆ ಕೊಟ್ಟಿದ್ದಾರೆ.
ಇನ್ನು ಸಮುದಾಯದ ನಾಯಕರಿಗೂ ನಾನು ಮನವಿ ಮಾಡುತ್ತೇನೆ. ಮಕ್ಕಳ ಹಿತದೃಷ್ಟಿಯಿಂದ ಎಲ್ಲರು ಕೂಡ ನ್ಯಾಯಾಲಯದ ಆದೇಶ ಪಾಲಿಸಬೇಕು ಎಂದರು.
PublicNext
15/03/2022 11:25 am