ಬೆಂಗಳೂರು: ಉಕ್ರೇನ್‌ನಿಂದ ನವೀನ್ ಮೃತದೇಹವನ್ನು ತರುವ ಅಸಾಧ್ಯವಾದ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭಗೀರಥ ಪ್ರಯತ್ನದಿಂದ ಸಾಧಿಸಿ, ಐತಿಹಾಸಿಕ ಕೆಲಸ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನವೀನ್ ಮೃತದೇಹ ಸ್ವೀಕರಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.
ಉಕ್ರೇನ್ ಸುತ್ತಲಿನ ಎಲ್ಲ ದೇಶಗಳ ಜೊತೆಗೆ ಸಂಪರ್ಕ ಬೆಳೆಸಿ ರಾಜತಾಂತ್ರಿಕವಾಗಿ ವಿಮಾನನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಅನುಮತಿ ಪಡೆದು ಕರೆತರಲಾಗಿದೆ. ಇಡೀ ಪ್ರಕ್ರಿಯೆ ಸಮನ್ವಯದ ಆಧಾರದ ಮೇಲೆಯೇ ಆಗಿದೆ. ನವೀನ್ ವೈದ್ಯಕೀಯ ಶಿಕ್ಷಣ ಮುಗಿಸಿ ಹಿಂದಿರುಗುವ ವೇಳೆಗೆ ಅವನ ತಂದೆ-ತಾಯಿ ಬರಮಾಡಿಕೊಳ್ಳಬೇಕಿತ್ತು. ಆದರೆ ನವೀನ್ ಮೃತದೇಹವನ್ನು ಬರಮಾಡಿಕೊಳ್ಳಬೇಕಿರುವುದು ಅತ್ಯಂತ ನೋವಿನ ಸಂಗತಿ ಎಂದು ಸಿಎಂ ಬೊಮ್ಮಾಯಿ ವಿಷಾದ ವ್ಯಕ್ತಪಡಿಸಿದ್ದಾರೆ.
ಯುದ್ಧ ಭೂಮಿಯಿಂದಲೂ ಹಲವಾರು ವಿದ್ಯಾರ್ಥಿಗಳು ವಾಪಸ್ಸಾಗಿದ್ದಾರೆ. ದುರ್ದೈವವಶಾತ್ ನವೀನ್ ಮಿಸೈಲಿನ ಮೆಟಲ್ ಬಡಿದು ತೀರಿಹೋಗಿದ್ದಾನೆ.
ಪ್ರಧಾನಿ ನರೇಂದ್ರ ಮೋದಿ ಅವರು ಕುಟುಂಬವನ್ನು ಸಂಪರ್ಕಿಸಿ ಧೈರ್ಯ ಹೇಳಿದ್ದರು. ಆಪರೇಷನ್ ಗಂಗಾ ಮೂಲಕ ಕರ್ನಾಟಕದ 62 ವಿದ್ಯಾರ್ಥಿಗಳು ಆಪರೇಷನ್ ಗಂಗಾ ಪ್ರಾರಂಭವಾಗುವ ಮುಂಚೆಯೇ ಬಂದಿದ್ದಾರೆ. 3 ವಾರಗಳ ಕಾಲ ನಡೆದ ಆಪರೇಷನ್ ಗಂಗಾ ಸುಲಭದ ಮಾತಲ್ಲ. ಬೇರೆ ಯಾವ ರಾಷ್ಟ್ರಗಳೂ ತನ್ನ ನಾಗರಿಕರನ್ನು ಕರೆಸುವ ಇಷ್ಟು ದೊಡ್ಡ ಪ್ರಯತ್ನವನ್ನು ಮಾಡಿಲ್ಲ. ಅವರವರ ಹಣೆಬರಹಕ್ಕೆ ಬಿಟ್ಟಿದ್ದರು ಎಂದರು.
ಕರ್ನಾಟಕದ 572 ವಿದ್ಯಾರ್ಥಿಗಳು ವಾಪಸ್ ಇಡೀ ದೇಶದ 19000 ವಿದ್ಯಾರ್ಥಿಗಳನ್ನು ವಾಪಸ್ ಕರೆತರಲಾಗಿದೆ. ಕರ್ನಾಟಕದ 572 ಜನ ಹಿಂದಿರುಗಿದ್ದಾರೆ. ಪ್ರಧಾನ ಮಂತ್ರಿಗಳ ಕಚೇರಿ ಹಾಗೂ ವಿದೇಶಾಂಗ ಸಚಿವ ಜಯಶಂಕರ್ ಅವರೊಂದಿಗೂ ನಿರಂತರವಾಗಿ ಸಂಪರ್ಕದಲ್ಲಿದ್ದು, ಸಂಸತ್ ಸದಸ್ಯರೂ ಸಹ ಸಂಪರ್ಕದಲ್ಲಿದ್ದು ಪ್ರಯತ್ನ ಮಾಡಿದ್ದಾರೆ ಎಂದರು.
Kshetra Samachara
21/03/2022 10:31 am