ಬೆಂಗಳೂರು: ಉಕ್ರೇನ್ ನಲ್ಲಿ ಮೃತಪಟ್ಟ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಚಳಗೆರಿ ಗ್ರಾಮದ ನವೀನ್ ಗ್ಯಾನಗೌಡರ ಅವರ ಅಂತಿಮ ದರ್ಶನ ಪಡೆದು ಬೆಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.
ಸುಮಾರು 3 ನಿಮಿಷ ತನಕ ಪ್ರಧಾನಿಯವರೊಂದಿಗೆ ಮಾತುಕತೆ ನಡೆಸಿದ ಮುಖ್ಯಮಂತ್ರಿ, ನವೀನ್ ಪಾರ್ಥಿವ ಶರೀರ ದೇಶಕ್ಕೆ ತರುವಲ್ಲಿ ತಮ್ಮ ಪಾತ್ರ ಹಿರಿದಾಗಿತ್ತು.
ನವೀನ್ ಮುಖ ನೋಡಬೇಕೆಂಬ ಆತನ ತಂದೆ- ತಾಯಿಯ ಆಸೆಯನ್ನು ಈಡೇರಿಸಿದ್ದೀರಿ. ಅದಕ್ಕಾಗಿ ರಾಜ್ಯದ ಪರವಾಗಿ ತಮಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಯುದ್ಧಭೂಮಿಯಿಂದ ಮೃತದೇಹ ತರುವುದು ಸುಲಭದ ಮಾತಲ್ಲ. ತಮ್ಮ ಉತ್ತಮ ರಾಜತಾಂತ್ರಿಕ ಬಾಂಧವ್ಯದ ಕಾರಣ ಇದು ಸಾಧ್ಯವಾಗಿದೆ ಎಂದೂ ಮೆಚ್ಚುಗೆ ವ್ಯಕ್ತಪಡಿಸಿದರು.
PublicNext
21/03/2022 07:11 pm