ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಬೆಂಬಲ

ಆನೇಕಲ್: ಜನಸಾಮಾನ್ಯರ ಮೇಲೆ ಏರುತ್ತಿರುವ ಬೆಲೆ ಏರಿಕೆ ಹಾಗೂ ರೈತ ವಿರೋಧಿ ಕಾನೂನುಗಳನ್ನು ಕೈಬಿಡುವಂತೆ ಒತ್ತಾಯಿಸಿ ಇದೇ ತಿಂಗಳು 28 29 ನೇ ತಾರೀಕು ಎರಡು ದಿನಗಳ ಕಾಲ ರಾಷ್ಟ್ರವ್ಯಾಪ್ತಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಹಾಗೂ ದೇಶಾದ್ಯಂತ ಬಂದ್‌ಗೆ ಕರೆ ನೀಡಿದೆ.

ಆನೇಕಲ್ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಪಿಎಂ ಆನೇಕಲ್ ಕಾರ್ಮಿಕ ಘಟಕದ ಅಧ್ಯಕ್ಷ ಮಾದೇಶ್, ರೈತ ವಿರೋಧಿ ಕಾನೂನು ನಾಲ್ಕು ಸಂಹಿತೆ ಹಿಂಪಡೆಯಬೇಕು. ರೈತರ ಬೆಳೆಗಳಿಗೆಗೆ ಬೆಂಬಲ ಬೆಲೆ ಯಥಾಸ್ಥಿತಿ ಮುಂದುವರಿಸಬೇಕು. ಬೆಲೆ ಏರಿಕೆ ತಡೆಯಬೇಕು. ಸರ್ಕಾರ ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಸರ್ಕಾರದ ವಿರುದ್ಧ ಎರಡು ದಿನಗಳ ಕಾಲ ಪ್ರತಿಭಟನೆ ನಡೆಸಲಾಗುತ್ತಿದೆ. ಹೀಗಾಗಿ ಕಾರ್ಯಕ್ರಮವನ್ನು ಯಶಸ್ವಿ ಮಾಡುವಂತೆ ಮನವಿ ಮಾಡಿಕೊಂಡರು.

ಇನ್ನೂ ಕಾರ್ಯಕ್ರಮದಲ್ಲಿ ಎಐಟಿಯುಸಿ ಆನೇಕಲ್ ಆಧ್ಯಕ್ಷ ತೋಟಗೆರೆ ಮಾತನಾಡಿ ದುಡಿಯುವ ವರ್ಗ ಮತ್ತು ಕಾರ್ಮಿಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಸರ್ಕಾರ ಕಣ್ಮುಚ್ಚಿ ಕುಳಿತುಕೊಂಡಿದೆ ಜತಗೆ ರೈತ ವಿರೋಧಿ ಸಮಿತಿಗಳನ್ನು ಹಿಂಪಡೆಯಬೇಕು ಒಂದು ವೇಳೆ ಹಿಂಪಡೆದ ಹೋದರೆ ಪಾರ್ಲಿಮೆಂಟಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆಯನ್ನು ನೀಡಿದರು. ಇನ್ನು ಪತ್ರಿಕಾಗೋಷ್ಟಿಯಲ್ಲಿ ಕಾರ್ಮಿಕರು ಹಾಗೂ ಸಂಘಟನೆಯ ಕಾರ್ಯಕರ್ತರು ಭಾಗಿಯಾಗಿದ್ದರು.

Edited By : Nagesh Gaonkar
PublicNext

PublicNext

24/03/2022 03:22 pm

Cinque Terre

25.48 K

Cinque Terre

0

ಸಂಬಂಧಿತ ಸುದ್ದಿ