ದೊಡ್ಡಬಳ್ಳಾಪುರ : ಬಹು ದಿನಗಳ ಹೋರಾಟದ ಫಲ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೇಗೆರಿತು. ಆದರೆ ಇಲ್ಲಿವರೆಗೂ ಪಟ್ಟಣ ಪಂಚಾಯಿತಿಗೆ ಚುನಾವಣೆ ನಡೆದಿಲ್ಲ. ಸಾರ್ವಜನಿಕರಿಲ್ಲದೆ ಕೇವಲ ಅಧಿಕಾರಿಗಳು ಮತ್ತು ಮಾಜಿ ಜನಪ್ರತಿನಿಧಿಗಳ ಸಮ್ಮುಖದಲ್ಲಿ ನಡೆದ ಬಜೆಟ್ ಪೂರ್ವಭಾವಿ ಸಭೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ವರ್ಷದ ಹಿಂದೆ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯತಿಯನ್ನು ಮೇಲ್ದರ್ಜೆಗೇರಿಸಿ ಪಟ್ಟಣ ಪಂಚಾಯತಿಯನ್ನಾಗಿ ಸರ್ಕಾರ ಘೋಷಣೆ ಮಾಡಿತು. ಇದರಿಂದ ಅಭಿವೃದ್ಧಿಗೆ ವೇಗ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಸ್ಥಳೀಯರಿಗೆ ಮಾತ್ರ ನಿರಾಸೆ ಮೂಡಿದೆ. ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಬಳಿಕ ಅಧಿಕಾರಿಗಳು ಎರಡನೇ ಬಾರಿಗೆ ಬಜೆಟ್ ಮಂಡಿಸಲು ಸಿದ್ದತೆ ನಡೆಸಿದ್ದಾರೆ. ಆದರೆ ಬಜೆಟ್ ಪೂರ್ವಭಾವಿ ಸಭೆಯ ಬಗ್ಗೆ ಸಾರ್ವಜನಿಕರಿಗೆ, ಸಂಘ ಸಂಸ್ಥೆಗಳಿಗೆ, ಹೋರಾಟಗಾರರಿಗೆ ಮಾಹಿತಿ ಇಲ್ಲದೆ ಗೈರಾಗಿದ್ದರು. ಕೇವಲ ಬೆರಳೆಣಿಕೆಯಷ್ಟು ಮಂದಿ ಅಧಿಕಾರಿಗಳು, ಮಾಜಿ ಸದಸ್ಯರು ಮಾತ್ರ ಸಭೆಯಲ್ಲಿ ಭಾಗಿಯಾಗಿದ್ದರು.
PublicNext
26/03/2022 02:55 pm