ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸಿದ್ದಗಂಗಾ ಶ್ರೀಗಳ 115ನೇ ಹುಟ್ಟುಹಬ್ಬಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮನ

ಬೆಂಗಳೂರು: ಏಪ್ರಿಲ್ 1 ರಂದು ನಡೆದಾಡುವ ದೇವರೆಂದು ಪ್ರಸಿದ್ಧರಾಗಿದ್ದ ಡಾ.ಶಿವಕುಮಾರ ಸ್ವಾಮಿಗಳ 115 ನೇ ಹುಟ್ಟುಹಬ್ಬ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮಿಸಲಿದ್ದಾರೆ. ಬೆಳಗ್ಗೆ 10.30 ಕ್ಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶ್ರೀಗಳ ಹೆಸರಲ್ಲಿ ನಡೆಯುವ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ‌ ಊಟದ ಜೊತೆಗೆ ತುಮಕೂರು ಕಾರ್ಯಕ್ರಮ ಮುಕ್ತಾಯವಾಗುತ್ತದೆ.

ಗೃಹ ಸಚಿವ ಅಮಿತ್ ಶಾ ರವರು ಮಧ್ಯಾಹ್ನ 2 ಗಂಟೆಗೆ ಚಿಕ್ಕಬಳ್ಳಾಪುರದ ವೈದ್ಯಕೀಯ ಕಾಲೇಜ್ ನಿರ್ಮಾಣದ ಭೂಮಿ ಪೂಜೆಗೆ ಚಾಲನೆ ನೀಡುವರು. ನಂತರ ಚಿಕ್ಕಬಳ್ಳಾಪುರ ಕಾರ್ಯಕ್ರಮದ ನಂತರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಸಹಕಾರ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ.

ನೂತನವಾಗಿ ನಂದಿನಿ ಕ್ಷೀರ ಅಭಿವೃದ್ಧಿ ಬ್ಯಾಂಕ್ ಪುನರ್ ಪ್ರಾರಂಭ ಮಾಡಲಾಗುವುದು. ಇದೇ ವೇಳೆ ಯಶಸ್ವಿನಿ ಲೋಗೊ ಬಿಡುಗಡೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಾವಿರಾರು ಜನ‌ ಭಾಗಿಯಾಗಲಿದ್ದಾರೆ.

Edited By :
PublicNext

PublicNext

30/03/2022 09:17 pm

Cinque Terre

30.85 K

Cinque Terre

0

ಸಂಬಂಧಿತ ಸುದ್ದಿ