ಬೆಂಗಳೂರು: ಏಪ್ರಿಲ್ ಒಂದರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಹಕಾರ ಸಮ್ಮೇಳನವನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದ ವೇದಿಕೆ ಸಿದ್ಧತೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಖುದ್ದಾಗಿ ಪರಿಶೀಲನೆ ನಡೆಸಿದರು.
ಸಮ್ಮೇಳನಕ್ಕೆ ಆಗಮಿಸುವ ಸಚಿವರು, ಶಾಸಕರು, ಸಂಸದರು ಹಾಗೂ ಸಹಕಾರಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ವಾಹನ ನಿಲುಗಡೆ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದರು.
ಈ ಸಂದರ್ಭ ಸಚಿವರುಗಳಾದ ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ಶಾಸಕರಾದ ನಾಗೇಂದ್ರ, ರಾಜಕುಮಾರ್ ಪಾಟೀಲ್ ತೆಲ್ಕೂರ್, ಮಾಡಾಳ್ ವಿರೂಪಾಕ್ಷಪ್ಪ, ಪೊಲೀಸ್ ಕಮಿಷನರ್ ಕಮಲ್ ಪಂತ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
31/03/2022 10:13 am