ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಆಂಧ್ರದ ಶ್ರೀಶೈಲದಲ್ಲಿ ಕನ್ನಡ ಭಕ್ತರ ಮೇಲೆ ಹಲ್ಲೆ: ರಕ್ಷಣೆಗೆ ಆಂಧ್ರ ಮುಖ್ಯಮಂತ್ರಿಗೆ CM ಮನವಿ

ಬೆಂಗಳೂರು: ಆಂಧ್ರದ ಶ್ರೀಶೈಲದಲ್ಲಿ ಕನ್ನಡಿಗ ಭಕ್ತರ ಮೇಲೆ ಹಲ್ಲೆ ನಡೆದಿದೆ. ಬೇರೆ ರಾಜ್ಯಗಳಿಂದ ಜಾತ್ರೆಗಳಿಗೆ ಭೇಟಿ ನೀಡುವವರು ಹೆಚ್ಚಿರುತ್ತಾರೆ . ಅಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕು. ಹೊರಗಿನಿಂದ ಬರುವ ಭಕ್ತರಿಗೆ ರಕ್ಷಣೆ ನೀಡಬೇಕು ಎಂದು ಆಂಧ್ರಪ್ರದೇಶದ ಮುಖ್ಯ ಮಂತ್ರಿಗಳಿಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಆಂಧ್ರದ ಜಾತ್ರೆಲಿ ನಡೆದ ಹಿಂಸಾಚಾರ ಬಗ್ಗೆ ವಿಧಾನಸೌಧದಲ್ಲಿ ಮಾಧ್ಯಮದೊಂದಿಗೆ ಅವರು ಮಾತನಾಡಿದರು.

ಮಹಾರಾಷ್ಟ್ರ, ಕರ್ನಾಟಕ & ಆಂಧ್ರ ಪ್ರದೇಶದಿಂದಲೂ ದೊಡ್ಡ ಪ್ರಮಾಣದಲ್ಲಿ ಭಕ್ತಾದಿಗಳು ಭೇಟಿ ನೀಡುತ್ತಾರೆ. ಹಿಂದಿರುಗುವ ಸಂದರ್ಭದಲ್ಲಿ ಕೆಲವು ಭಕ್ತರ ನಡುವೆ ಜಗಳ ಉಂಟಾಗಿ ಇರಿತವೂ ನಡೆದಿದೆ. ಈ ಹಿನ್ನೆಲೆ ಸ್ಥಳೀಯರು ಮತ್ತು ಹೊರಗಿನಿಂದ ಬಂದಿದ್ದ ಭಕ್ತರ ನಡುವೆ ಜಗಳ ಉಂಟಾಗಿದೆ.

ಆಂಧ್ರ ಪ್ರದೇಶದ ಅಧಿಕಾರಿಗಳೊಂದಿಗೆ ರಾತ್ರಿಯಿಂದಲೇ ಸಂಪರ್ಕದಲ್ಲಿದ್ದೇನೆ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ. ಇಬ್ಬರಿಗೆ ತೀವ್ರವಾಗಿ ಗಾಯವಾಗಿವೆ. ಆಸ್ಪತ್ರೆಗೆ ದಾಖಲಿಸಲಾಗಿದ್ದು,ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದರು.

SureshBabu.Public Next. Bengaluru.

Edited By : Nagesh Gaonkar
PublicNext

PublicNext

01/04/2022 07:53 am

Cinque Terre

21.96 K

Cinque Terre

1

ಸಂಬಂಧಿತ ಸುದ್ದಿ