ಬೆಂಗಳೂರು: ಹಾಲು ಉತ್ಪಾದಕರಿಗಾಗಿ ಮೀಸಲಿರುವ ಕ್ಷೀರ ಸಮೃದ್ಧಿ ಸಹಕಾರಿ ಬ್ಯಾಂಕನ್ನು ಸ್ಥಾಪಿಸಿರುವ ಏಕೈಕ ರಾಜ್ಯ ಕರ್ನಾಟಕ. ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಪ್ರಗತಿಪರ ಯೋಜನೆ ಹಮ್ಮಿಕೊಂಡು ಅಭಿವೃದ್ಧಿಗೆ ಒತ್ತು ನೀಡುತ್ತಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರಿ ಸಚಿವ ಅಮಿತ್ ಶಾ ಮೆಚ್ಚುಗೆ ವ್ಯಕ್ತಪಡಿಸಿದರು.
ಇಂದು ಅರಮನೆ ಮೈದಾನದಲ್ಲಿ ನಂದಿನಿ ಕ್ಷೀರಸಮೃದ್ಧಿ ಬ್ಯಾಂಕಿನ ಲಾಂಛನ ಬಿಡುಗಡೆ ಮಾಡಿದರು. ದೇಶದ ಸಫಲ ಸಹಕಾರಿ ಆಂದೋಲನಗಳ ಪೈಕಿ ಕರ್ನಾಟಕದ ಸಹಕಾರಿ ರಂಗದಲ್ಲಿ ಯಶಸ್ಸು ಸಾಧಿಸಿರುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯ ‘ಎ’ ಶ್ರೇಣಿಯಲ್ಲಿದೆ. ಕರ್ನಾಟಕದ ಸಹಕಾರ ಆಂದೋಲನವನ್ನು ಸುವರ್ಣಾಕ್ಷರಗಳಲ್ಲಿ ಬರೆಯಲಾಗುತ್ತದೆ ಎಂದರು.
ಕ್ಷೀರ ಸಮೃದ್ಧಿ ಸಹಕಾರಿ ಬ್ಯಾಂಕ್ ಸ್ಥಾಪನೆ ಮೂಲಕ ಗ್ರಾಮೀಣ ಅಭಿವೃದ್ಧಿಯನ್ನು ಬಲಪಡಿಸುವ ಕೆಲಸ ಆಗಿದೆ. ಹಾಲು ಉತ್ಪಾದಕರಿಗೆ ಕ್ರೆಡಿಟ್ ಕಾರ್ಡ್ ನೀಡುವ ಮೂಲಕ ರೈತರನ್ನು ಆತ್ಮನಿರ್ಭರರನ್ನಾಗಿ ಮಾಡಲಾಗ್ತದೆ. ಕರ್ನಾಟಕದ ಪ್ರತಿ ಗ್ರಾಮದಲ್ಲಿ ಸಹಕಾರಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಹಕಾರ ಕ್ಷೇತ್ರದ ಗಣ್ಯರು, ಅಧಿಕಾರಿಗಳು ಬಿಜೆಪಿ ಪ್ರಮುಖ ನಾಯಕರು ಉಪಸ್ಥಿತರಿದ್ದರು..
Kshetra Samachara
01/04/2022 10:41 pm