ಬೆಂಗಳೂರು: ಹಲಾಲ್ ಕಟ್, ಜಟ್ಕಾ ಕಟ್ ವಿವಾದ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಈ ಬಗ್ಗೆ ಇವತ್ತು ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಎಲ್ಲಾ ಜಿಲ್ಲೆಯ ಎಸ್‌ಪಿಗಳಿಗೆ-ಡಿಸಿಗಳಿಗೆ ಈಗಾಗಲೇ ಸೂಚಿಸಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಸಿಎಂ ಹೇಳಿದ್ದಾರೆ. ಪ್ರತಿಯೊಬ್ಬರಿಗೆ ಹಬ್ಬ ಆಚರಿಸಲು ಸ್ವಾತಂತ್ರ ಇದೆ. ಹಾಗೇನೆ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಲಾಗಿದೆ ಅಂತಲೂ ಸಿಎಂ ಬೊಮ್ಮಾಯಿ ಹೇಳಿದರು.
PublicNext
02/04/2022 01:26 pm