ಬೆಂಗಳೂರು: ಬೆಂಗಳೂರಿನ ಚಾಮರಾಜ ಪೇಟೆಯ ಕೋಟೆ ಮೈದಾನದಲ್ಲಿ ಶ್ರೀರಾಮ ಸೇವಾ ಮಂಡಳಿ- ರಾಮ ನವಮಿ ಸೆಲೆಬ್ರೇಶನ್ ಟ್ರಸ್ಟ್ ಏರ್ಪಡಿಸಿದ್ದ 84ನೇ ಶ್ರೀ ರಾಮ ನವಮಿ ಸಂಗೀತೋತ್ಸವ ಕಾರ್ಯಕ್ರಮಕ್ಕೆ ಸಿಎಂ ಬಸವ ರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಸಿಎಂ, ಶ್ರೀರಾಮ ದೇವರ ಭಕ್ತ ಹನುಮಂತ ಹುಟ್ಟಿದ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ನಮ್ಮ ಸರ್ಕಾರ ಸಿದ್ಧವಿದೆ. 100 ಕೋಟಿ ರೂ. ವೆಚ್ಚದಲ್ಲಿ ಹಂಪಿ ಸಮೀಪದ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲಾಗುವುದು ಎಂದರು.
ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಡಾ.ಸುಧಾ ಮೂರ್ತಿ, ಶಿಕ್ಷಣ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಂಗಪ್ಪ ಸೇರಿದಂತೆ ಭಕ್ತ ಸಮೂಹ ಉಪಸ್ಥಿತರಿದ್ದರು.
SureshBabu. Public Next. B'luru.
PublicNext
02/04/2022 10:33 pm