ಬೆಂಗಳೂರು: ಜೆ.ಜೆ.ನಗರದ ಕೊಲೆ ಪ್ರಕರಣ ಸಂಬಂಧ ಪ್ರಚೋದನಕಾರಿ ಹೇಳಿಕೆ ಖಂಡಿಸಿ ಗೃಹ ಸಚಿ ಅರಗ ಜ್ಞಾನೇಂದ್ರ ವಿರುದ್ಧ ಎಫ್ ಐಆರ್ ದಾಖಲಿಸಿಬೇಕೆಂದು ಕಾಂಗ್ರೆಸ್ ನಿಯೋಗ ಡಿಜಿ-ಐಜಿಪಿ ಪ್ರವೀಣ್ ಸೂದ್ ಗೆ ದೂರು ನೀಡಿದೆ.
ಈ ಸಂಬಂಧ ನಿನ್ನೆ ಸಂಜೆ ಮಲ್ಲೇಶ್ವರಂ ಪೊಲೀಸರಿಗೆ ದೂರು ನೀಡಿದರೂ ಕ್ರಮ ಕೈಗೊಂಡಿರಲಿಲ್ಲ. ಈ ನಿಟ್ಟಿನಲ್ಲಿ ಇಂದು ನೃಪತುಂಗ ರಸ್ತೆಯಲ್ಲಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಕಾಂಗ್ರೆಸ್ ಮುಖಂಡ ಮನೋಹರ್ ನೇತೃತ್ವದ ನಿಯೋಗ ದೂರು ನೀಡಿದೆ.
ದೂರ ನೀಡಿದ ಬಳಿಕ ಮಾತನಾಡಿದ ಮನೋಹರ್ ಗೋರಿಪಾಳ್ಯದಲ್ಲಿ ನಡೆದ ಯುವಕನ ಕೊಲೆ ವಿಚಾರವಾಗಿ ಗೃಹ ಸಚಿವರು ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ.
ಧರ್ಮ-ಧರ್ಮಗಳ ನಡುವೆ ಒಡಕು ಮೂಡುವ ರೀತಿ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ್ದಾರೆ. ಅದೇ ರೀತಿ ಬಿಜೆಪಿ ಎಂಎಲ್ ಸಿ ರವಿಕುಮಾರ್ ಸಹ ಇದಕ್ಕೆ ಸಾಥ್ ನೀಡಿದ್ದಾರೆ. ಇಬ್ಬರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ನಿನ್ನೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ.
ಹೀಗಾಗಿ ಇಂದು ಡಿಜಿಗೆ ಭೇಟಿ ಮಾಡಿ ಗೃಹ ಸಚಿವರ ವಿರುದ್ಧ ದೂರು ನೀಡಲಾಗಿದೆ. ಸೂಕ್ತ ಕ್ರಮ ಕೈಗೊಳ್ಳುವುದಾಗಿ ಡಿಜಿ ಭರವಸೆ ನೀಡಿದ್ದಾರೆ ಎಂದರು.
ಬೈಟ್.ಮನೋಹರ್ ಕಾಂಗ್ರೆಸ್ ಮುಖಂಡ
PublicNext
07/04/2022 06:12 pm