ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸಚಿವ ಸಂಪುಟದಿಂದ ಈಶ್ವರಪ್ಪ ವಜಾಕ್ಕೆ ಆಗ್ರಹಿಸಿ ಕಾಂಗ್ರೆಸ್ ನಿಯೋಗದಿಂದ ರಾಜ್ಯಪಾಲರಿಗೆ ಮನವಿ

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಅವರ ವಿರುದ್ಧ ಭ್ರಷ್ಟಾಚಾರ ಹಾಗೂ ಕೊಲೆ ಪ್ರಕರಣ ದಾಖಲಿಸಬೇಕು. ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರ ನಿಯೋಗವು ಇಂದು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.

ಮೃತ ಸಂತೋಷ್ ತನ್ನ ಆತ್ಮಹತ್ಯೆಗೆ ಈಶ್ವರಪ್ಪನವರೇ ಕಾರಣ. ಕಾಮಗಾರಿ ಬಿಲ್ ಮಂಜೂರಾತಿಗೆ ಸಂಬಂಧಿಸಿದಂತೆ ಶೇ 40 ಕಮಿಷನ್ ಕೇಳಿದ್ದರು. ಇದಕ್ಕೆ ಸಂಬಂಧಿಸಿದಂತೆ ಪ್ರಧಾನಿಗಳಿಗೂ ಸಂತೋಷ್ ದೂರು ಸಲ್ಲಿಸಿದ್ದರು. ಇದರ ಬಗ್ಗೆ ಯಾವ ಕ್ರಮವೂ ಆಗಲಿಲ್ಲ. ಇದೀಗ ಸಂತೋಷ ತನ್ನ ಸಾವಿಗೆ ಕಾರಣರಾಗಿರುವವರ ಹೆಸರನ್ನು ವಾಟ್ಸಾಪ್ ಮೂಲಕ ತಿಳಿಸಿದ್ದಾರೆ. ಹಾಗಾಗಿ ತಕ್ಷಣಕ್ಕೆ ಈಶ್ವರಪ್ಪ ಅವರನ್ನು ವಜಾ ಮಾಡಬೇಕು ಎಂದು ಮನವಿ ಪತ್ರದಲ್ಲಿ ವಿವರಿಸಿದ್ದಾರೆ.

ನಿಯೋಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್, ಪಕ್ಷದ ಕಾರ್ಯಾಧ್ಯಕ್ಷರುಗಳಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಈಶ್ವರ್ ಖಂಡ್ರೆ ಸೇರಿದಂತೆ ಹಲವು ಮುಖಂಡರು ಇದ್ದರು.

Edited By : Shivu K
PublicNext

PublicNext

13/04/2022 10:59 am

Cinque Terre

28.42 K

Cinque Terre

2

ಸಂಬಂಧಿತ ಸುದ್ದಿ