ಬೆಂಗಳೂರು: ಡೆತ್ ನೋಟ್ ಬರೆದು ಉಡುಪಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವು ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ.
40 ಪರ್ಸೆಂಟ್ ಕಮೀಷನ್ ಡಿಮ್ಯಾಂಡ್ ಮಾಡಿರುವುದಾಗಿ ಆರೋಪಿಸಿ ಕಳೆದ ಒಂದು ತಿಂಗಳ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. ಅಲ್ಲದೆ ರಾಜ್ಯ ಸರ್ಕಾರದ ಗಮನಕ್ಕೂ ತಂದಿದ್ದರು. ಈ ಬೆಳವಣಿಗೆ ಮಧ್ಯೆಯೇ ನಾಪತ್ತೆಯಾಗಿದ್ದ ಸಂತೋಷ್ ಪಾಟೀಲ್ ಲಾಡ್ಜ್ ವೊಂದರಲ್ಲಿ ಡೆತ್ ನೋಟ್ ಬರೆದು ಸುಸೈಡ್ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಅವರೇ ನೇರ ಕಾರಣ ಎಂದು ಆರೋಪಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿ ಎಡಿಜಿಪಿಗೆ ದೂರು ನೀಡಿದೆ.
ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ಮುಖಂಡ. ಎಸ್.ಮನೋಹರ್ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ನೇರ ಕಾರಣ ಸಚಿವ ಕೆ.ಎಸ್.ಈಶ್ವರಪ್ಪ ಈ ಸಂಬಂಧ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದರೂ ಪೊಲೀಸರು ಇನ್ನು ಬಂಧಿಸಿಲ್ಲ.
ಆರಾಮಾಗಿ ಸಚಿವರು ಓಡಾಡಿಕೊಂಡಿದ್ದಾರೆ. ಈ ಸಂಬಂಧ ರಾಜ್ಯ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಪ್ರತಾಪ್ ರೆಡ್ಡಿ ಅವರಿಗೆ ದೂರು ನೀಡಲಾಗಿದೆ ಎಂದರು.
Kshetra Samachara
13/04/2022 03:12 pm