ಬೆಂಗಳೂರು: ಡೆತ್ ನೋಟ್ ಬರೆದು ಉಡುಪಿಯ ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವು ಪ್ರಕರಣ ಸಾಕಷ್ಟು ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಎಫ್ಐಆರ್ ನಲ್ಲಿ ಈಶ್ವರಪ್ಪ ಹೆಸರು ಉಲ್ಲೇಖ ಆದರೂ ಅರೆಸ್ಟ್ ಕೂಡ ಮಾಡಿಲ್ಲ. ಸಚಿವ ಸ್ಥಾನಕ್ಕೆ ಅವರು ರಾಜೀನಾಮೆ ಕೂಡ ಕೊಡುತ್ತಿಲ್ಲ ಎಂದು ಆರೋಪಿಸಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ.
ಇಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ನಲಪಾಡ್ ನೇತೃತ್ವದಲ್ಲಿ ಸಿಎಂ ಮನೆ ಮುಂದೆ ಕಪ್ಪು ಪಟ್ಟಿ ತೋರಿಸಿ ಪ್ರತಿಭಟನೆ ನಡೆಸಿದ್ರು. ಈ ವೇಳೆ ನಲಪಾಡ್ ಸೇರಿದಂತೆ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
PublicNext
13/04/2022 05:19 pm