ಬೆಂಗಳೂರು: ಕೇವಲ ಈಶ್ವರಪ್ಪನವರ ಮೇಲೆ ಮಾತ್ರವಲ್ಲ ಇಡೀ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಇದೆ. ರಾಜ್ಯ ಇತಿಹಾಸದಲ್ಲಿ ಇಂತಹ ಭ್ರಷ್ಟ ಸರ್ಕಾರ ಕಂಡಿಲ್ಲ. ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಕೆಪಿಸಿಸಿ ಕಚೇಯಲ್ಲಿಂದು ಮಾತನಾಡಿದ ಅವರು, ಎಲ್ಲಾ ಇಲಾಖೆಗಳಲ್ಲಿ 40% ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇಡೀ ಸರ್ಕಾರಕ್ಕೆ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗೇಳುತ್ತಿದೆ. ಹೀಗಾಗಿ ರಾಜ್ಯ ಪ್ರವಾಸ ಮಾಡಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ ಎಂದು ಅವರು ಹೇಳಿದರು. ಸಂತೋಷ್ ಆತ್ಮಹತ್ಯೆಗೂ ಮುನ್ನWatsupನಲ್ಲಿ ಬಹಳ ವಿವರವಾಗಿ ತನಗೆ ಆದ ಮೋಸ, ಹಿಂಸೆಯ ಬಗ್ಗೆ ವಿವರಿಸಿದ್ದಾರೆ. ಈಶ್ವರಪ್ಪ ಅವರ ಮೇಲೆ ಎಫ್ ಐ ಆರ್ ದಾಖಲಾಗಿದೆ. ಈಶ್ವರಪ್ಪ ಅವರ ವಿರುದ್ಧ ಕೇಳಿ ಬಂದಿರುವ ಆರೋಪದ ಹಿನ್ನೆಲೆಯಲ್ಲಿ ಅವರ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಇದು ಜಾಮೀನು ರಹಿತ ಅಪರಾಧವಾಗಿದೆ ಎಂದು ಹೇಳಿದ್ರು.
ರಾಜ್ಯವನ್ನು ಬಿಜೆಪಿ ಸರ್ಕಾರ ಲೂಟಿ ಮಾಡುತ್ತಿದೆ. ಈ ವಿಚಾರವನ್ನು ಬಯಲಿಗೆಳೆಯಲು ಅಧಿವೇಶನದಲ್ಲಿ ನಿಲುವಳಿ ಸೂಚನೆ ಮಂಡನೆ ಮಾಡಿದರೂ ಸ್ಪೀಕರ್ ಅವರು ಸರ್ಕಾರದ ಸಲಹೆ ಮೇರೆಗೆ ನಾವು ಪ್ರಾಥಮಿಕ ವರದಿ ಸಲ್ಲಿಕೆಗೆ ಅವಕಾಶ ನೀಡದೇ ಸ್ವಯಂ ಪ್ರೇರಿತರಾಗಿ ತಿರಸ್ಕರಿಸಿದರು. ಸ್ಪೀಕರ್ ಅವರು ಈ ರೀತಿ ಮಾಡದಿದ್ದರೆ ಚರ್ಚೆಗೆ ಅವಕಾಶ ನೀಡಿದ್ದರೆ, ಸರ್ಕಾರದ ಬಣ್ಣ ಬಯಲು ಮಾಡುತ್ತಿದ್ದೆವು ಎಂದು ಹೇಳಿದ್ರು.
PublicNext
13/04/2022 07:11 pm