ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಈಶ್ವರಪ್ಪ ಮೇಲೆ ಭ್ರಷ್ಟಾಚಾರ ಆರೋಪದಡಿ ಪ್ರಕರಣ ದಾಖಲಿಸಿ

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್‌ ಸಾವು ಪ್ರಕರಣದಲ್ಲಿ ಮುಖ್ಯ ಆರೋಪಿಯಾಗಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸಾಕ್ಷ್ಯಧಾರ ನಾಶಪಡಿಸಿರುವ ಗುಮಾನಿ ವ್ಯಕ್ತವಾಗಿದೆ. ಅಲ್ಲದೆ. ಶೇ.40 ರಷ್ಟು ಕಮಿಷನ್ ಬೇಡಿಕೆ ಆರೋಪ ಸಂಬಂಧ ಭ್ರಷ್ಟಾಚಾರ ಆರೋಪದಡಿ ಪ್ರಕರಣ ದಾಖಲಿಸಬೇಕೆಂದು ಸಾಮಾಜಿಕ ಕಾರ್ಯಕರ್ತ ಆಲಂಪಾಷಾ ಎಸಿಬಿಗೆ ದೂರು ನೀಡಿದ್ದಾರೆ.

ಉಡುಪಿಯ ಲಾಡ್ಜ್ ವೊಂದರಲ್ಲಿ ಏ.12 ರಂದು ಸಂತೋಷ್ ಪಾಟೀಲ್ ನಿಗೂಢವಾಗಿ ಸಾವನ್ನಪ್ಪಿದ್ದರು.‌ಈ ಸಂಬಂಧ ಈಶ್ವರಪ್ಪ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪ ಕೇಳಿ ಬಂದ ತಕ್ಷಣವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡದೆ ಏ.15ರ ರಾತ್ರಿವರೆಗೂ ಸಮಯ ತೆಗೆದುಕೊಂಡಿದ್ದರು. ಈ ಅವಧಿಯಲ್ಲಿ ತಮ್ಮ ಪ್ರಭಾವ ಬಳಸಿ ಸಂತೋಷ್ ಸಾವಿಗೆ ಸಂಬಂಧಿಸಿದ ಸಾಕ್ಷ್ಯನಾಶ ಮಾಡಿದ್ದಾರೆ. ಅಲ್ಲದೆ ಸಂತೋಷ್ ಕುಟುಂಬಸ್ಥರು ನೀಡಿದ ದೂರಿನಲ್ಲಿ ಶೇ.40 ರಷ್ಟು ಕಮಿಷನ್ ಕೇಳಿದ್ದ ವಿಚಾರವೂ ಇತ್ತು.‌ಆದರೆ ಎಫ್ಐಆರ್ ನಲ್ಲಿ ಮೂಲ ಆರೋಪದ ಬಗ್ಗೆ ಉಲ್ಲೇಖವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈಶ್ವರಪ್ಪ ವಿರುದ್ಧ ಕಳೆದ ವರ್ಷವೇ ಸಂತೋಷ್ ಪ್ರಧಾನಿಗೆ ಪತ್ರ ಬರೆದಿದ್ದರು. ಇದಕ್ಕೆ ಸಂಬಂಧಿಸಿದ ಕಡತಗಳನ್ನ, ತನಿಖೆ ನಡೆಸುತ್ತಿರುವ ಉಡುಪಿ ಪೊಲೀಸರು ಎಸಿಬಿಗೆ ಹಸ್ತಾಂತರಿಸಿಲ್ಲ. ಹೀಗಾಗಿ ಏ.16 ರಂದು ಈಶ್ವರಪ್ಪ ಹಾಗೂ ಏಳು ಮಂದಿ ಅಧಿಕಾರಿಗಳ ವಿರುದ್ಧ ಎಸಿಬಿ ದೂರು ನೀಡಲಾಗಿದೆ‌ ಎಂದರು.

ಈಶ್ವರಪ್ಪ‌ ರಾಜೀನಾಮೆಗೂ ಮುನ್ನ ಭಾರೀ ಪ್ರಮಾಣದ ಕಮಿಷನ್ ಅಕ್ರಮ ವ್ಯವಹಾರ ನಡೆದಿರುವ ಸಾಧ್ಯತೆಯಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ತರಾತುರಿಯಲ್ಲಿ 5,500 ಕೋಟಿ ಟೆಂಡರ್ ಗಳಿಗೆ 8 ದಿನಗಳಲ್ಲಿ ಮಂಜೂರಾತಿ ನೀಡಲಾಗಿದೆ. ಕೆಟಿಪಿಐ ಆಕ್ಟ್ ಪ್ರಕಾರ ಟೆಂಡರ್ ಪ್ರಕ್ರಿಯೆ ಕನಿಷ್ಟ 30 ದಿನಗಳವರೆಗೆ ಇರಬೇಕಿದೆ. ಆದರೆ, ಇಲ್ಲಿ ಏ. 21ಕ್ಕೆ ಟೆಂಡರ್ ಮುಗಿಯುವಂತೆ ಮಾಡಲಾಗಿದೆ ಎಂದು ಆರೋಪಿಸಿದರು.

Edited By :
PublicNext

PublicNext

18/04/2022 05:56 pm

Cinque Terre

40.87 K

Cinque Terre

0

ಸಂಬಂಧಿತ ಸುದ್ದಿ