ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರೈತರಿಗೆ ಕೃಷಿ ಯೋಜನೆಗಳ ಬಗ್ಗೆ ಜಾಗೃತಿ ಕಾರ್ಯಕ್ರಮ

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಸರ್ಜಾಪುರ ಗ್ರಾಮದಲ್ಲಿ ಬಿಜೆಪಿ ಸಂಸ್ಥಾಪನ ದಿನದ ಅಂಗವಾಗಿ ಬೆಂಗಳೂರು ದಕ್ಷಿಣ ಜಿಲ್ಲಾ ರೈತ ಮೋರ್ಚಾ ವತಿಯಿಂದ ರೈತರಿಗೆ ಕೃಷಿ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಅದರಲ್ಲೂ ರೈತರಿಗೆ ರೈತ ಯೋಜನೆಗಳಾದ ಪಿಎಂ ಕಿಸಾನ್ ಸನ್ಮಾನ ನಿಧಿ, ಪಿಎಂ ಫಸಲ್ ಭೀಮಾ ಯೋಜನೆ, ಪಿಎಂ ಕೃಷಿ ಸಿಂಚಾಯಿ ಯೋಜನೆ, ಮಣ್ಣಿನ ಆರೋಗ್ಯ ಕಾರ್ಡ್, ಬೇವು ಲೇಪಿತ ಯೂರಿಯಾ ಸೇರಿದಂತೆ ಹಲವು ಯೋಜನೆಗಳನ್ನು ರೈತರಿಗೆ ಜಾಗೃತಿ ಮೂಡಿಸಲಾಯಿತು. ಈ ಕಾರ್ಯಕ್ರಮದಲ್ಲಿ ರೈತ ಮೋರ್ಚಾ ಮಂಡಳದ ಅಧ್ಯಕ್ಷ ಯೋಗೇಶ ರೆಡ್ಡಿ, ಜಿಲ್ಲಾಧ್ಯಕ್ಷ ಅಶೋಕ್ ಮಾತೃ ಘಟಕದ ಸರ್ಜಾಪುರ ಮಂಡಲದ, ಅಧ್ಯಕ್ಷ ಸುರೇಶ್ ರೆಡ್ಡಿ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

18/04/2022 07:58 pm

Cinque Terre

1.07 K

Cinque Terre

0

ಸಂಬಂಧಿತ ಸುದ್ದಿ