ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ನಡುವೆ ಟ್ವೀಟ್ ವಾರ್ ಜೋರಾಗಿದೆ.
ಸಿದ್ದರಾಮಯ್ಯ ಅವರ ಟ್ವೀಟ್‌ಗೆ ಪ್ರತ್ಯುತ್ತರ ನೀಡಿರುವ ಎಚ್.ಡಿ.ಕುಮಾರಸ್ವಾಮಿ ಅವರು, ಆಪರೇಷನ್ ಕಮಲವೆಂಬ ಅನೈತಿಕ ಕೂಸಿನ ಬೇನಾಮಿ ಅಪ್ಪ, ಆ ಪಾಪಕ್ಕೆ ಪ್ರತಿಯಾಗಿ ಪಡೆದ ಫಲದ ಬಗ್ಗೆ ಪಲಾಯನವೇಕೆ ಸುಳ್ಳುರಾಮಯ್ಯ? ಕಳ್ಳಮಾಲು ಹ್ಯೂಬ್ಲೆಟ್ ವಾಚಿನ ಬಗ್ಗೆ ವಾಕರಿಕೆ ಬರುವಷ್ಟು ಹೇಸಿಗೆ ಕಥೆಗಳೇ ಇವೆ. ಇವೆರಡೂ ಪ್ರಶ್ನೆಗಳಿಗೂ ಉತ್ತರಿಸುತ್ತಿಲ್ಲ, ಯಾಕಯ್ಯಾ ಎಂದು ಪ್ರಶ್ನಿಸಿದ್ದಾರೆ.
ಈಶ್ವರಪ್ಪ ಬಗ್ಗೆ ಮಾತನಾಡಿ, ಅಭ್ಯಂತರವಿಲ್ಲ. ಡಿವೈಎಸ್ಪಿ ಗಣಪತಿ ಬಗ್ಗೆಯೂ ಹೇಳಿ, ಬೇಜಾರಿಲ್ಲ. ಆದರೆ; ಕಲ್ಲಪ್ಪ ಹಂಡೀಭಾಗ್ ಬಗ್ಗೆ ಮಾತನಾಡಿದರೆ ನಿಮ್ಮ ಜಾಣ ಮೌನವೇಕೆ? ಆ ಪಾಪಕ್ಕೆ ಪ್ರಾಯಶ್ಚಿತ್ತ ಅನುಭವಿದೇ ವಿಧಿಯೇ ಇಲ್ಲ. ಪ್ರಾಮಾಣಿಕ ಅಧಿಕಾರಿಯ ದುರಂತ ಅಂತ್ಯ ನಿಮ್ಮನ್ನು ಸುಮ್ಮನೆ ಬಿಡಲ್ಲ ಎಂದು ತಿಳಿಸಿದ್ದಾರೆ.
ಕೊನೆಗೆ 4 ಪ್ರಶ್ನೆಗಳೆಂದರೆ 1.ಆಪರೇಷನ್ ಕಮಲಕ್ಕೆ ಸಹಕರಿಸಿದ್ದಕ್ಕೆ ಸಿಕ್ಕ ಪ್ರತಿಫಲವೆಷ್ಟು?, 2.ಆ ಪಾಪದ ಹಣವನ್ನು ಏನು ಮಾಡಿದಿರಿ?, 3. ಹ್ಯೂಬ್ಲೆಟ್ ವಾಚಿನ 'ಸಿದ್ದರಹಸ್ಯ'ವೇನು?, 4.ಅರ್ಕಾವತಿ ರೀಡೂ ಬಗ್ಗೆ ಮೌನವೇಕೆ? ಧೈರ್ಯವಿದ್ದರೆ ಉತ್ತರಿಸಿ, ವಿಷಯಾಂತರ ಬೇಡ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.
PublicNext
20/04/2022 05:36 pm