ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಎಮ್ ಎಲ್ ಸಿ ರಮೇಶ್ ಗೌಡ.

ದೊಡ್ಡಬಳ್ಳಾಪುರ : ಜೆಡಿಎಸ್ ಪಕ್ಷದ ವರಿಷ್ಠರು ತಮ್ಮನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದರೆ ನಾಳೆಯಿಂದಲೇ ದೊಡ್ಡಬಳ್ಳಾಪುರ ‌ಕ್ಷೇತ್ರದಲ್ಲಿ ತಳಮಟ್ಟದಿಂದ ಪಕ್ಷ ಸಂಘಟಿಸಿ ಗೆಲುವು ಸಾಧಿಸುತ್ತೇನೆ ಎಂದಿರುವ ಜೆಡಿಎಸ್‌ ವಿಧಾನಪರಿಷತ್ ರಮೇಶ್ ಗೌಡ ತಾನೇ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿ ಬಿಟ್ಟಿದ್ದಾರೆ.

ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಎಲ್ಲಾ ಮುಖಂಡರೊಟ್ಟಿಗೆ ಸಂಪರ್ಕದಲ್ಲಿದ್ದೇನೆ. ವಿಧಾನ ಪರಿಷತ್ ಚುನಾವಣೆ ವೇಳೆ ಅತಿ ಹೆಚ್ಚು ಮತ‌ ಇಲ್ಲಿಂದಲೇ ಬಂದಿವೆ. ಜನರ ನಾಡಿ ಮಿಡಿತ ಅರಿತಿದ್ದೇನೆ. ಹಾಗಾಗಿ ನಾನು ದೊಡ್ಡಬಳ್ಳಾಪುರ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಹೇಳಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಅವರು ಕ್ಷೇತ್ರದಲ್ಲಿ ಮೂರು ಬಾರಿ ಸ್ಪರ್ಧಿಸಿ ಸೋತಿದ್ದಾರೆ. ಸ್ಥಳೀಯ ಮುಖಂಡರ ಗೊಂದಲ ಹಾಗೂ ಅಸಹಕಾರದಿಂದ ಪಕ್ಷಕ್ಕೆ ಸೋಲಾಗಿದೆ.

ದೊಡ್ಡಬಳ್ಳಾಪುರ ಕ್ಷೇತ್ರಕ್ಕೂ ನಮ್ಮ ಕುಟುಂಬಕ್ಕೂ ಅವಿನಾಭಾವ ಸಂಬಂಧ ಇದೆ. ನನಗೆ ಟಿಕೆಟ್ ಕೊಡುವ ಭರವಸೆ ನೀಡಿದರೆ ವಾರಕ್ಕೆ ನಾಲ್ಕು ದಿನ‌ ಕ್ಷೇತ್ರದಲ್ಲಿಯೇ ವಾಸ್ತವ್ಯ ಹೂಡಿ ಸ್ಥಳೀಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದರು.

Edited By : PublicNext Desk
Kshetra Samachara

Kshetra Samachara

20/04/2022 06:41 pm

Cinque Terre

1.82 K

Cinque Terre

0

ಸಂಬಂಧಿತ ಸುದ್ದಿ