ದೇವನಹಳ್ಳಿ: 2023ರ ವಿಧಾನಸಭೆ ಚುನಾವಣೆಗೆ ಬಿಜೆಪಿ ಈಗಿನಿಂದಲೇ ಚುನಾವಣಾ ಸಿದ್ಧತೆ ಕೈಗೊಂಡಿದೆ. ಬೆಂಗಳೂರು ಗ್ರಾಮಾಂತರ ದೇವನಹಳ್ಳಿಯ ಖಾಸಗಿ ಶಾಲೆಯಲ್ಲಿ ವಿಭಾಗೀಯ ಮಟ್ಟದ ಕಾರ್ಯಕಾರಿಣಿ ಸಭೆಯನ್ನು ಏರ್ಪಡಿಸಿದೆ.
ಸಭೆಯಲ್ಲಿ ಮಾಜಿ ಸಿ.ಎಂ.ಯಡಿಯೂರಪ್ಪ, ಸಚಿವ ಡಾ.ಕೆ.ಸುಧಾಕರ್ ಮತ್ತು ಎಂಟಿಬಿ ನಾಗರಾಜ್ ಸೇರಿದಂತೆ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಭಾಗದ ಜಿಲ್ಲಾಧ್ಯಕ್ಷರು, ಕಾರ್ಯಾಧ್ಯಕ್ಷರು, ಕಾರ್ಯದರ್ಶಿಗಳು ಸೇರಿದಂತೆ ಆಯ್ದ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರದ ಪದಾಧಿಕಾರಿಗಳು ಭಾಗವಹಿಸಿದರೆ, ನಾಳೆ ಕೋಲಾರ ಮತ್ತು ತುಮಕೂರು ಪದಾಧಿಕಾರಿಗಳ ಸಭೆ ನಡೆಯಲಿದೆ.
ಇಂದು ದಿನಪೂರ್ತಿ ಸಭೆ ನಡೆಯಲಿದೆ. ಇದೇ ವೇಳೆ ಯಡಿಯೂರಪ್ಪ ಮಾತನಾಡಿ, ಬಿಜೆಪಿ ಪಕ್ಷ 150 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿಯೊಂದಿಗೆ ಕೆಲಸ ಪ್ರಾರಂಭಿಸಿದ್ದೇವೆ. ದೇಶದಲ್ಲಿ ಭ್ರಷ್ಟಾಚಾರ ಮುಕ್ತವಾಗಿ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಆರ್ಥಿಕ, ರಕ್ಷಣೆ & ಮಹಿಳಾ ಸಭಲೀಕರಣ ಸೇರಿ ಹತ್ತಾರು ಕಾರ್ಯಕ್ರಮ ಯಶಸ್ವಿಯಾಗಿವೆ.
ದೇಶಗಳಲ್ಲಿ ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಕರ್ನಾಟಕ ದಲ್ಲಿ ಕಾಂಗ್ರೆಸ್ ಉಸಿರಾಡ್ತಿದೆ. ಮುಂದಿನ ವಿಧಾನ ಸಭೆ ಚುನಾವಣೆಲಿ ಅದು ಕೊನೆಯಾಗುತ್ತೆ ಎಂದು ಕಾಂಗ್ರೆಸ್ ಪಕ್ಷಕ್ಕೆ ಕುಟುವಾಗಿ ಕುಟುಕಿದರು.
PublicNext
21/04/2022 03:19 pm