ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಕಾಂಗ್ರೆಸ್ ಪಕ್ಷಕ್ಕೆ ಅಡ್ರೆಸ್ ಎಲ್ಲಿದೆ !?; ಬಿಜೆಪಿ ಸಮಾವೇಶದಲ್ಲಿ ಯಡಿಯೂರಪ್ಪ ವಾಗ್ದಾಳಿ

ದೇವನಹಳ್ಳಿ: ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಕಾರ್ಯಗಳಿಂದ ದೇಶದಲ್ಲಿ ಬಿಜೆಪಿಯ ಗಾಳಿ ಬೀಸ್ತಿದೆ.

ಉತ್ತರ ಪ್ರದೇಶದಲ್ಲಿ 403 ಸೀಟುಗಳಲ್ಲಿ ಕಾಂಗ್ರೆಸ್ 397 ಕಡೆ ಠೇವಣಿ ಕಳೆದುಕೊಂಡಿದೆ.

ಕಾಂಗ್ರೆಸ್ಸಿಗೆ ಎಲ್ಲಿದೆ ಅಡ್ರೆಸ್!? ಮುಳುಗ್ತಿದೆ ಕಾಂಗ್ರೆಸ್ ಹಡಗು. ಯಾರಿದ್ದಾರೆ ಅವರಿಗೆ ನಾಯಕರು ? ಎಂದು ಯಡಿಯೂರಪ್ಪ ಕಾಂಗ್ರೆಸ್ ಪಕ್ಷದ ಸ್ಥಿತಿಗತಿ ಬಗ್ಗೆ ದೇವನಹಳ್ಳಿಯಲ್ಲಿ ಇಂದು ನಡೆದ ಬಿಜೆಪಿ ಸಮಾವೇಶದಲ್ಲಿ ಕುಟುಕಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಸ್ವಲ್ಪ ಉಸಿರಾಡ್ತಿದೆ.ಮುಂಬರುವ ವಿಧಾನಸಭೆ ಚುನಾವಣೆ ನಂತರ ಕಾಂಗ್ರೆಸ್ ನೆಲಸಮ ಆಗಲಿದೆ. ಅದಕ್ಕಾಗಿ ಕಾರ್ಯಕರ್ತರು ಹೋರಾಟ ಮಾಡಬೇಕಿದೆ. ಕಾಂಗ್ರೆಸ್ ಮುಕ್ತ ಕರ್ನಾಟಕ & ಕಾಂಗ್ರೆಸ್ ಮುಕ್ತ ಭಾರತ ಮಾಡಲು ಸಿದ್ಧರಾಗಿ.

ಪ್ರಧಾನಿ ಮೋದಿಯವರ ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಮನೆ- ಮನೆಗೆ ತಲುಪಿಸಿ. ಮೋದಿ ದೇಶಕ್ಕೆ ಸಾಮಾಜಿಕವಾಗಿ, ಆರ್ಥಿಕವಾಗಿ ಕೃಷಿಕರಿಗೆ ಭದ್ರತೆ ನೀಡಿದ್ದಾರೆ. ಮಹಿಳಾ ಸಬಲೀಕರಣದ ಬಗ್ಗೆ ಸಾಕಷ್ಟು ಕೆಲಸ ಮಾಡಿದ್ದಾರೆ ಎಂದರು.

- SureshBabu 'Public Next' Devanahalli

Edited By : Manjunath H D
PublicNext

PublicNext

22/04/2022 08:52 pm

Cinque Terre

49.25 K

Cinque Terre

5

ಸಂಬಂಧಿತ ಸುದ್ದಿ