ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಗೃಹ ಸಚಿವರ ವಜಾ ಕೋರಿ ರಾಜ್ಯಪಾಲರಿಗೆ ಆಪ್ ಮನವಿ

ಬೆಂಗಳೂರು: ಪಿಎಸ್‌ಐ ಪರೀಕ್ಷೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮಧ್ಯ ಪ್ರವೇಶಿಸುವಂತೆ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಮನವಿ ಮಾಡಿದ್ದಾರೆ. ಅಲ್ಲದೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿದ್ದಾರೆ. ನಿಯೋಗದಲ್ಲಿ ಪಕ್ಷದ ಹಿರಿಯ ಮುಖಂಡ ಭಾಸ್ಕರ್ ರಾವ್ ಹಾಗೂ ಪಕ್ಷದ ಅನೇಕ ಮುಖಂಡರುಗಳು ಇದ್ದರು.

ರಾಜಭವನದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರನ್ನು ಮಂಗಳವಾರ ಭೇಟಿ ಮಾಡಿದ ಪೃಥ್ವಿ ರೆಡ್ಡಿ ಮೂರು ಆಗ್ರಹಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಿದರು.

ಇವುಗಳನ್ನು ಶೀಘ್ರ ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಬೇಕೆಂದು ಮನವಿ ಮಾಡಿದರು. ಮೊದಲನೆಯದಾಗಿ, ರಾಜ್ಯದ 52,000 ಅಭ್ಯರ್ಥಿಗಳು ಪಿಎಸ್‌ಐ ಪರೀಕ್ಷೆ ಬರೆದಿದ್ದಾರೆ. ಈಗ ಅಕ್ರಮ ಬಯಲಾಗಿರುವ ಹಿನ್ನೆಲೆ ಅಭ್ಯರ್ಥಿಗಳನ್ನು ಕಾಯಿಸದೇ ಶೀಘ್ರವೇ ಮರುಪರೀಕ್ಷೆ ನಡೆಸಬೇಕಾದ ಅವಶ್ಯಕತೆಯಿದೆ. ಇದಕ್ಕಾಗಿ ನೂತನ ಪ್ರಾಧಿಕಾರ ರಚಿಸಿ ಪಾರದರ್ಶಕವಾಗಿ ಪರೀಕ್ಷಾ ಪ್ರಕ್ರಿಯೆಗಳನ್ನು ಕೈಗೊಳ್ಳಬೇಕು. ಈ ಕುರಿತು ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಪೃಥ್ವಿ ರೆಡ್ಡಿ ವಿನಂತಿಸಿದರು.

Edited By :
Kshetra Samachara

Kshetra Samachara

26/04/2022 06:32 pm

Cinque Terre

4.49 K

Cinque Terre

0

ಸಂಬಂಧಿತ ಸುದ್ದಿ