ಆನೇಕಲ್: ಬಹುಮತವಿಲ್ಲದ ಸಭೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಸಂಸದ ಡಿಕೆ ಸುರೇಶ್ ಎದುರು ಕಪ್ಪುಪಟ್ಟಿ ಧರಿಸಿ ಧಿಕ್ಕಾರ ಕೂಗಿ ಆಕ್ರೋಶವನ್ನು ಹೊರಹಾಕಿದ್ದಾರೆ.
ಹೌದು ಆನೇಕಲ್ ತಾಲೂಕಿನ ಬೊಮ್ಮಸಂದ್ರ ಪುರಸಭೆಯಲ್ಲಿ ಇಂದು ಸಾಮಾನ್ಯ ಸಭೆ ಕರೆಯಲಾಗಿತ್ತು..ಆದರೆ ನಿನ್ನೆ ಇದ್ದ ಸಭೆಯ ದಿನಾಂಕವನ್ನು ಬದಲಾಯಿಸಿ ಮಾಹಿತಿ ನೀಡದೆ ಸಭೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ಬೆಂಬಲಿತ ಚುನಾಯಿತ ಪ್ರತಿನಿಧಿಗಳು ಆಕ್ರೋಶ ಹೊರ ಹಾಕಿದ್ದಾರೆ..ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿ ಹೊರನಡೆದ್ರು. ಇದು ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವಿನ ಗಲಾಟೆ ಗದ್ದಲಕ್ಕೆ ಕಾರಣವಾಯಿತು. ಇನ್ನು ಸಭೆಯಲ್ಲಿ ಸಂಸದ ಡಿಕೆ ಸುರೇಶ್ ಹಾಗೂ ಶಾಸಕ ಶಿವಣ್ಣ ಭಾಗಿಯಾಗಿದ್ದರು..
PublicNext
29/04/2022 10:01 pm