ಹೊಸಕೋಟೆ : ಮಾಲೂರು ಕ್ಷೇತ್ರದ ಜೆಡಿಎಸ್ ಪಕ್ಷದ ಮಾಜಿ ಶಾಸಕ ಮಂಜುನಾಥಗೌಡ ಬಿಜೆಪಿ ಸೇರ್ಪಡೆ ಬಗ್ಗೆ ನನ್ನ ವಿರೋಧವಿದೆ ಎಂದು ಪೌರಾಡಳಿತ ಸಚಿವ MTB.ನಾಗರಾಜ್ ಅಸಮಾಧಾನ ಹೊರಹಾಕಿದ್ದಾರೆ.
ಹೊಸಕೋಟೆಯ ಜಿಲ್ಲಾ ಕಾರ್ಯಕಾರಣಿಯಲ್ಲಿ ಮಾತನಾಡಿದ ಅವರು, ಮಂಜುನಾಥಗೌಡ ಬಿಜೆಪಿ ಸೇರ್ಪಡೆ ಬಗ್ಗೆ ಸ್ಥಳೀಯ ಹೊಸಕೋಟೆ ಕಾರ್ಯಕರ್ತರಲ್ಲಿ ಗೊಂದಲವಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಮೂಲಕ ಗುರುತಿಸಿಕೊಂಡು ನಮ್ಮ ವಿರುದ್ಧವಾಗಿ ಕೆಲಸ ಮಾಡಿದ್ದಾರೆ.
ಬಿಜೆಪಿಗರನ್ನು ಗಣನೆಗೆ ತೆಗೆದುಕೊಳ್ಳದೆ ಪಕ್ಷ ಸೇರ್ಪಡೆಗೆ ಪಕ್ಷದಲ್ಲಿ ಕೆಲವರು ಒಪ್ಪಿದ್ದಾರೆ. ಈಗಾಗಲೇ ಹೈಕಮಾಂಡ್ ಕೂಡಾ ತೀರ್ಮಾನ ತೆಗೆದುಕೊಂಡಿದೆ. ಬಿಜೆಪಿ ಸೇರ್ಪಡೆ ಬಗ್ಗೆ ನಾಯಕರು ಸಹ ನನ್ನ ಬಳಿ ಚರ್ಚಿಸುವುದಾಗಿ ತಿಳಿಸಿದ್ದಾರೆ. ನಂತರ ಚರ್ಚಿಸಿ ಕಾರ್ಯಕರ್ತರ ಜೊತೆ ಮಾತನಾಡಿ ನಾನು ಸಮ್ಮತಿ ಸೂಚಿಸುವ ಬಗ್ಗೆ ತೀರ್ಮಾನಿಸುತ್ತೇನೆ ಎಂದಿದ್ದಾರೆ.
ಇದೇ ವೇಳೆ ಯಾವುದೇ ಪಕ್ಷದವರು ನಮ್ಮ ಪಕ್ಷಕ್ಕೆ ಸೇರ್ಪಡೆಯಾದ್ರು ಸಹ ನಮ್ಮ ಪಕ್ಷದ ಶಕ್ತಿ ಕುಗ್ಗಿಸಲು ಸಾಧ್ಯವಿಲ್ಲ ಎಂದಿದ್ದಾರೆ.
Kshetra Samachara
09/05/2022 07:41 pm