ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು :ಎಂಬಿ ಪಾಟೀಲರನ್ನು ಭೇಟಿಯಾದ ಅಶ್ವಥ್ ನಾರಾಯಣ್ : ಡಿಕೆಶಿ ಗುಡುಗು

ಬೆಂಗಳೂರು : 'ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಅವರು ತಮ್ಮ ಇಲಾಖೆ ಹಗರಣಗಳ ವಿಚಾರಗಳ ಬಗ್ಗೆ ಯಾರು ಧ್ವನಿ ಎತ್ತಬಾರದು, ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಅವರನ್ನು ಭೇಟಿ ಮಾಡಿದ್ದಾರೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಎಂ.ಬಿ. ಪಾಟೀಲ್ ಅವರ ನಿವಾಸಕ್ಕೆ ಸಚಿವ ಅಶ್ವತ್ ನಾರಾಯಣ್ ಅವರ ಭೇಟಿ ಕುರಿತು ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, 'ಅವರು ಸಹಜವಾಗಿಯೇ ಇದೊಂದು ಖಾಸಗಿ ಭೇಟಿ. ನಾವು ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದು, ಸಲಹೆ ಪಡೆಯಲು ಎಂ ಬಿ ಪಾಟೀಲರ ಮನೆಗೆ ಹೋಗಿದ್ದೆ ಎಂಬ ಸಬೂಬು ನೀಡುತ್ತಾರೆ. ಈಗ ಈ ವಿಚಾರವಾಗಿ ಚರ್ಚೆ ಮಾಡುವುದು ಬೇಡ. ಈ ವಿಚಾರವಾಗಿ ಅವರನ್ನೇ ಕೇಳಿ' ಎಂದರು.

Edited By : Shivu K
PublicNext

PublicNext

10/05/2022 03:43 pm

Cinque Terre

19.09 K

Cinque Terre

0

ಸಂಬಂಧಿತ ಸುದ್ದಿ