ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕುಮಾರಸ್ವಾಮಿ ನೇತೃತ್ವದಲ್ಲಿ ಮೇ13ರಂದು ನೆಲಮಂಗಲದಲ್ಲಿ 'ಜನತಾ ಜಲಧಾರೆ' ಸಮಾವೇಶ

ಬೆಂಗಳೂರು: ಇದೇ ತಿಂಗಳ 13ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ "ಜನತಾ ಜಲಧಾರೆ" ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಮತ್ತು ದೇವನಹಳ್ಳಿಯಲ್ಲಿ ಜೆಡಿಎಸ್ ಪಕ್ಷದ ಶಾಸಕರಿದ್ದಾರೆ. ಆದ್ದರಿಂದ ಹೆಚ್ಚಿನ‌ ಸಂಖ್ಯೆಯಲ್ಲಿ ಜನ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿದೆ ಎಂದು ಮಾಧ್ಯಮದ ಮೂಲಕ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ದೇವನಹಳ್ಳಿ ಜನತೆಗೆ ಕರೆ ನೀಡಿದ್ದಾರೆ.

ರಾಜ್ಯದಲ್ಲಿ ಕುಮಾರಸ್ವಾಮಿ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಜನತೆಗೆ ಉತ್ತಮ ಆಡಳಿತ ನೀಡಿದ್ದರು. ನಂತರ ಬಂದ ಸರ್ಕಾರಗಳು ಜನತೆಯ ಶೋಷಣೆ ಮಾಡಿದ್ದಾರೆ. ಆದ್ದರಿಂದ 2023ರ ವಿಧಾನಸಭೆಯ ಚುನಾವಣೆಯಲ್ಲಿ ಮತ್ತೆ ಜೆಡಿಎಸ್ ಸರ್ಕಾರ ಆಡಳಿತಕ್ಕೆ ಬರಲಿದೆ. ಆದ್ದರಿಂದ ಜನತೆಗೆ ಅನುಕೂಲವಾಗಲಿ ಎಂದು ಕುಡಿಯುವ ನೀರು ಮತ್ತು ನೀರಾವರಿ ಸೌಲಭ್ಯಗಳಿಗಾಗಿ ರಾಜ್ಯದ ಜನತೆಗೆ ನೀರು ಅತ್ಯಾವಶ್ಯಕ. ಜನತಾ ಜಲಧಾರೆ ಸಮಾವೇಶ ನಡೆಸಲಾಗ್ತಿದೆ. ಈ ಕಾರ್ಯಕ್ರಮಕ್ಕೆ ದೇವನಹಳ್ಳಿಯಿಂದ ನೂರು ಬಸ್‌ಗಳಲ್ಲಿ ಸಾವಿರಾರು ಜನ‌ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುತ್ತೇವೆ ಎಂದು ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

SureshBabu Public Next ದೇವನಹಳ್ಳಿ..

Edited By :
Kshetra Samachara

Kshetra Samachara

11/05/2022 01:06 pm

Cinque Terre

2.73 K

Cinque Terre

0

ಸಂಬಂಧಿತ ಸುದ್ದಿ