ಬೆಂಗಳೂರು: ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪಕ್ಷದ ರಾಜ್ಯ ಕೋರ್ ಕಮಿಟಿ ಸಭೆ ನಡೆಯಿತು.
ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಚಿವರಾದ ಎಂ. ಗೋವಿಂದ ಕಾರಜೋಳ, ಆರ್. ಅಶೋಕ್, ಡಾ. ಅಶ್ವತ್ಥನಾರಾಯಣ್, ಬಿ. ಶ್ರೀರಾಮುಲು, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ, ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣಾ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಅವರು ಉಪಸ್ಥಿತರಿದ್ದರು.
ಸಚಿವ ಸಂಪುಟ ವಿಸ್ತರಣೆ, ಮುಂದಿರುವ ಚುನಾವಣೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು.
PublicNext
14/05/2022 04:03 pm