ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಎಸ್‌ಸಿ, ಎಸ್‌ಟಿ ಐಕ್ಯ ವೇದಿಕೆಯಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಆನೇಕಲ್ : ಪ್ರಸನ್ನನಂದ ಸ್ವಾಮೀಜಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಆನೇಕಲ್ ತಾಲೂಕು ಮಟ್ಟದಲ್ಲಿ ಪ್ರಗತಿಪರ ಸಂಘಟನೆಗಳು ಮತ್ತು ದಲಿತ ಸಂಘಟನೆಗಳು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಮಾಚಿ ಪ್ರಸನ್ನನಂದ ಸ್ವಾಮೀಜಿ ವಿಧಾನಸೌಧ ಪಕ್ಕದಲ್ಲಿ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದಾರೆ. ನೂರು ದಿನಗಳ ಕಾಲ ಧರಣಿ ಕೂತಿದ್ದರೂ ಸಹ ಸರ್ಕಾರ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಹೀಗಾಗಿ ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ತಹಶಿಲ್ದಾರ್ ಕಚೇರಿ ಎದುರು ಪ್ರಗತಿಪರ ಸಂಘಟನೆಗಳು ಮತ್ತು ಎಸ್‌ಸಿ, ಎಸ್‌ಟಿ ಐಕ್ಯ ವೇದಿಕೆ ಮುಖಂಡರು ಬೀದಿಗಿಳಿದು ಪ್ರತಿಭಟನೆ ನಡೆಸಿದರು ಇನ್ನು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೋರಹಾಕಿದ್ದು.

ಇನ್ನು ಇದೇ ಸಂದರ್ಭದಲ್ಲಿ ಹಿರಿಯ ಹೋರಾಟಗಾರ ಜಿಗಣಿ ಶಂಕರ್ ಮಾತನಾಡಿ ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡುವಂತೆ, ಈಗಾಗಲೇ ಮಾಚಿ ಪ್ರಸನ್ನನಂದ ಸ್ವಾಮೀಜಿ ಅಹೋರಾತ್ರಿ ಧರಣಿ ಕುಳಿತು ನೂರು ದಿನಗಳ ಕಾಲ ಪ್ರತಿಭಟನೆ ನಡೆಸಿದ್ದಾರೆ. ಆದರೂ ಕೂಡ ಸರ್ಕಾರ ಈ ಬಗ್ಗೆ ಗಮನಹರಿಸಿಲ್ಲ. ಪಕ್ಕದ ಆಂಧ್ರಪ್ರದೇಶದಲ್ಲಿ ಜಗನ್ ಮೋಹನ್ ರೆಡ್ಡಿ ಒಂದು ಜಿಲ್ಲೆಗೆ ಬಾಬಾಸಾಹೇಬ್ ಅಂಬೇಡ್ಕರ್ ಹೆಸರನ್ನು ಇಟ್ಟಿದ್ದಾರೆ. ತಮಿಳುನಾಡಿನಲ್ಲಿ ಏಪ್ರಿಲ್ 14ನೇ ತಾರೀಕು ಸಮಾನತೆ ದಿನ ಅಂತ ಆಚರಣೆ ಮಾಡಿದ್ದಾರೆ. ಆದರೆ ಕರ್ನಾಟಕ ಸರ್ಕಾರದಲ್ಲಿ ಏಪ್ರಿಲ್ 14 ನೇ ತಾರೀಖಿನಂದು ರಾಯಚೂರಿನಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಬಾಬಾಸಾಹೇಬರಿಗೆ ಅಪಮಾನ ಮಾಡಿದರು. ಅವರಿಗೆ ಪ್ರಮೋಷನ್ ಮಾಡಿ ಬೆಂಗಳೂರಿಗೆ ಕರೆತಂದರು. ಮತ್ತೆ ಅವರ ಮೂಲಕವೇ ಕಾನೂನು ಮಂತ್ರಿಗಳಿಗೆ ಸನ್ಮಾನ ಮಾಡಿಸಿರುವುದು ಖಂಡನೀಯ. ಇದನ್ನ ನಾವು ಖಂಡಿಸುತ್ತೇವೆ ಅಹೋರಾತ್ರಿ ಧರಣಿಗೆ ಕುಳಿತಿರುವ ಪ್ರಸನ್ನನಂದ ಸ್ವಾಮೀಜಿಗೆ ಬೆಂಬಲ ಸೂಚಿಸುತ್ತೇವೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಜಿಗಣಿ ಶಂಕರ್ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

Edited By : Manjunath H D
Kshetra Samachara

Kshetra Samachara

20/05/2022 08:57 pm

Cinque Terre

2.89 K

Cinque Terre

0

ಸಂಬಂಧಿತ ಸುದ್ದಿ