ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸರ್ಜಾಪುರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿದ ಶಾಸಕ

ಆನೇಕಲ್ ವಿಧಾನ ಸಭಾ ಕ್ಷೇತ್ರದ ಸರ್ಜಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ವಾರ್ಡ್ 05 ರ ಜೈ ಭೀಮ್ ನಗರದಲ್ಲಿ ಶಾಸಕರ ವಿಶೇಷ ಅನುದಾನ ಮತ್ತು ಸರ್ಜಾಪುರ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಶಾಸಕ ಬಿ.ಶಿವಣ್ಣ ಮತ್ತು ಸರ್ಜಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್.ಎಂ ಶ್ರೀನಿವಾಸ್ ರವರು ಚಾಲನೆ ನೀಡಿದರು.

ಇನ್ನು ಇದೇ ಸಂಧರ್ಭದಲ್ಲಿ ಸರ್ಜಾಪುರ ಗ್ರಾಮ ಪಂಚಾಯಿತಿ ವತಿಯಿಂದ ಸಾರ್ವಜನಿಕರಿಗೆ ಉಚಿತವಾಗಿ ನೀರಿನ ಕ್ಯಾನ್ ಗಳನ್ನು ವಿತರಿಸಲಾಯಿತು.ಇನ್ನು ಇದೇ ಸಂಧರ್ಭದಲ್ಲಿ ಸರ್ಜಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್.ಎಂ. ಶ್ರೀನಿವಾಸ್ ಮಾತನಾಡಿ ಸರ್ಜಾಪುರ ಗ್ರಾಮ ಪಂಚಾಯಿತಿಯಲ್ಲಿ ಜನರ ಆರೋಗ್ಯವನ್ನು ಕಾಪಾಡಬೇಕು ಎಂಬುವ ಉದ್ದೇಶದಿಂದ ಶಾಸಕ ಬಿ.ಶಿವಣ್ಣ ರವರ ಅನುದಾನ ಮತ್ತು ಸರ್ಜಾಪುರ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಬಿಸಿದ್ದು ಸಾರ್ವಜನಿಕರು ಶುದ್ದ ಕುಡಿಯುವ ನೀರಿನ ಘಟಕದಲ್ಲಿ ಕುಡಿಯುವ ನೀರಿನ್ನು ಉತ್ತಮ ರೀತಿಯಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು, ಮುಂದಿನ ದಿನಗಳಲ್ಲಿ ಸರ್ಜಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಗತ್ಯವಿರುವ ಕಡೆ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು.

Edited By : Nirmala Aralikatti
Kshetra Samachara

Kshetra Samachara

21/05/2022 10:44 pm

Cinque Terre

1.26 K

Cinque Terre

0

ಸಂಬಂಧಿತ ಸುದ್ದಿ