ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡ್ಗೆವಾರ್ ಅವರ ಭಾಷಣವನ್ನು ಹತ್ತನೆಯ ತರಗತಿಯ 2022-23 ನೇ ಸಾಲಿನ ಶೈಕ್ಷಣಿಕ ವರ್ಷದ ಕನ್ನಡ ಪಠ್ಯಕ್ರಮದಲ್ಲಿ ಸೇರ್ಪಡೆ ಮಾಡಿದ್ದು, ಇದು ಶಿಕ್ಷಣದ ಕೇಸರೀಕರಣದ ಮುಂದುವರದ ಭಾಗವಾಗಿದೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ವಿರೋಧಿಸುತ್ತಿದೆ ಎಂದು ಕ್ಯಾಂಪಸ್ ಫ್ರಂಟ್ ತಿಳಿಸಿದೆ.
ನಗರದಲ್ಲಿ ಸೋಮವಾರ ಪ್ರೆಸ್ ಕ್ಲಬ್ ನಲ್ಲಿ ನೆಡೆದ ಪತ್ರಿಕಾಗೋಷ್ಠಿಯಲ್ಲಿ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯು ನಿಜವಾದ ಆದರ್ಶ ಪುರುಷ ಯಾರಾಗಬೇಕು? ಎಂಬ ತಲೆಬರಹದಲ್ಲಿ ಹೆಡ್ಗೆವಾರ್ ಭಾಷಣವನ್ನು ಹತ್ತನೇ ತರಗತಿಯ ಕನ್ನಡ ಗದ್ಯಪುಸ್ತಕದಲ್ಲಿ ಐದನೇ ಪಠ್ಯವಾಗಿ ಸೇರಿಸಲಾಗಿದೆ.
ಉದ್ದೇಶಪೂರ್ವಕವಾಗಿ ಪಠ್ಯಪುಸ್ತಕದ ಪಠ್ಯ ಕ್ರಮವನ್ನು ಬ್ರಾಹ್ಮಣೀಕರಣಗೊಳಿಸುವ ಗುರಿಯೊಂದಿಗೆ ಸಂಘದ ಗರಡಿಯಲ್ಲಿ ಪಳಗಿರುವ ರೋಹಿತ್ ಚಕ್ರತೀರ್ಥ ರಂತಹವರನ್ನು ಪರಿಷ್ಕರಣಾ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಸಂವಿಧಾನದ ಆಶಯಗಳನ್ನು ಅರಿತು ಸಮಾಜದಲ್ಲಿ ಸ್ನೇಹಾರ್ದತ, ಸಾಮರಸ್ಯಕ್ಕೆ ಒತ್ತು ಕೊಡುವ ನಿಟ್ಟಿನಲ್ಲಿ ಕಲಿಕೆ, ವಿದ್ಯೆಯನ್ನು ನೀಡಬೇಕು ಹೊರತು ಹಿಂದೂ ರಾಷ್ಟ್ರವೆಂಬ ಸಂವಿಧಾನಕ್ಕೆ ಅಪಚಾರವನಗುವ ದೇಶವಿರೋಧಿ ಆಲೋಚನೆ ಹೊಂದಿದ್ದ ವ್ಯಕ್ತಿಗಳ ಭಾಷಣ ಹೇಳಿ ಕೊಡುವ ಸರಕಾರದ ಈ ಕೃತ್ಯ ನೈಜ ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡುವಂತಿದೆ ಅದಲ್ಲದೆ, ಇದು ದೇಶದ್ರೋಹದ ನಡೆಯಾಗಿದೆ ಎಂದು ದೂರಿದರು.
ಹೆಡ್ಗೆವಾರ್ ಭಾಷಣವನ್ನು ಶೀಘ್ರ ಪಠ್ಯಕ್ರಮದಿಂದ ಕೈ ಬಿಡದಿದ್ದರೆ ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸುವ ಎಚ್ಚರಿಕೆ ನೀಡುತ್ತಿದ್ದೇವೆ ಎಂದರು.
ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿ ಅರಾಜಕತೆ ಸೃಷ್ಠಿಸುತ್ತಿರುವ ಬಿಜೆಪಿ ಸರ್ಕಾರ ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿ ಆರಾಜತೆಯನ್ನು ಬಿಜೆಪಿ ಸರ್ಕಾರವು ನಿರಂತರವಾಗಿ ನಡೆಸುತ್ತಿದೆ.
ಶಿಕ್ಷಣದ ಶೇಸರೀಕರಣ,ಭ್ರಷ್ಟಾಚಾರ ಹಾಗೂ ಹಗರಣ ಪ್ರಕರಣಗಳು ಇನ್ನಿತರ ಹಲವಾರು ಸಮಸ್ಯೆಗಳು ಕಾಡುತ್ತಿದೆ. ಎಲ್ಲಾ ಸಮುದಾಯದ ವಿದ್ಯಾರ್ಥಿಗಳು ವ್ಯಾಸಾಂಗ ನಡೆಸುತ್ತಿರುವ ಶಾಲೆಗಳಲ್ಲಿ ಭಗವದ್ಗೀತೆಯ ಹೇರಿಕೆ, ದೇಶದ್ರೋಹಿ ಹೆಡ್ಗೆವಾರ್ ನ ಭಾಷಣದ ಸೇರ್ಪಡೆ ಹಾಗೂ ಪ್ರಗತಿಪರರ, ಸ್ವಾತಂತ್ರ್ಯ ಹೋರಾಟಗಾರರ ಪಠ್ಯಗಳಿಗೆ ಕತ್ತರಿ ಹಾಕುವ ಮುಖಾಂತರ ಶೈಕ್ಷಣಿಕ ಕ್ಷೇತ್ರವನ್ನು ಸಂಪೂರ್ಣವಾಗಿ ಬ್ರಾಹ್ಮಣೀಕರಣದ ಕೇಸರೀಕರಣ ನಡೆಸಲು ಮುಂದಾಗಿದೆ ಎಂದು ಹೇಳಿದರು.
PublicNext
23/05/2022 08:13 pm