ಬೆಂಗಳೂರು: ಪಠ್ಯ ಪುಸ್ತಕಗಳ ಪರಿಷ್ಕರಣೆಯನ್ನು ರದ್ದುಗೊಳಿಸಿ ಎಂದು ಶಿಕ್ಷಣ ಸಚಿವರಿಗೆ ಹಳ್ಳಿ ಹಕ್ಕಿ ಶಾಸಕ ಅಡುಗೂರು ಹೆಚ್. ವಿಶ್ವನಾಥ್ ಆಗ್ರಹಿಸಿದರು.
ಮಂಗಳವಾರ ಪ್ರೆಸ್ ಕ್ಲಬ್ ನಲ್ಲಿ ನೆಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೋಹಿತ್ ಚಕ್ರತೀರ್ಥ ಅವರ ಅಧ್ಯಕ್ಷತೆಯ ಪಠ್ಯ ಪರಿಷ್ಕರಣೆ ಸಮಿತಿಯನ್ನು ರದ್ದುಗೊಳಿಸಬೇಕು. ಅವರಲ್ಲಿ ಯಾರು ಸರಿಯಾದ ಶಿಕ್ಷಣ ತಜ್ಞರಲ್ಲ. ಅಲ್ಲದೇ, ಆ ಸಮಿತಿಯನ್ನು ಸ್ಥಾಪಿಸುವ ಆಗಲಿ ಅಂತವ ಪುಸ್ತಕ ಪರಿಷ್ಕರಣೆ ಮಾಡುವಾಗಲಾಗಲಿ ಯಾವುದೇ ನಿಯಮಗಳನ್ನು ಪಾಲಿಸಿಲ್ಲ ಎಂದು ದೂರಿದರು.
ಕೇವಲ ಒಂದು ಧರ್ಮ, ಪಕ್ಷದ ಆಯಾಮದಲ್ಲಿ ಪುಸ್ತಕವನ್ನು ಬದಲಾಯಿಸುವುದು ಸರಿಯಲ್ಲ. ಇದನ್ನು ಮಕ್ಕಳ ಭವಿಷ್ಯದ ಪ್ರಶ್ನೆ. ಮಕ್ಕಳು ಎಂದು ಏಕ ಪಕ್ಷ ದೃಷ್ಟಿಕೋನದಲ್ಲಿ ಬೆಳೆಯಬಾರದು. ಅದು ಉತ್ತಮ ಬೆಳವಣಿಗೆ ಅಲ್ಲ. ಹಾಗಾಗಿ ಈ ಪಠ್ಯವನ್ನು ರದ್ದುಗೊಳಿಸಬೇಕು ಎಂದು ಹೇಳಿದರು.
PublicNext
24/05/2022 03:40 pm