ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು ಬ್ರೇಕಿಂಗ್: ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಎರಚಿದ‌ ಕಾರ್ಯಕರ್ತರು

ಬೆಂಗಳೂರು: ರೈತ ಮುಖಂಡ ರಾಕೇಶ್ ಟಿಕಾಯತ್ ಮುಖಕ್ಕೆ ರೈತ ಸಂಘಟನೆಗಳ ಕಾರ್ಯಕರ್ತರು ಮಸಿ ಬಳಿದಿದ್ದಾರೆ.

ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಈ ಘಟನೆ ನಡೆದಿದೆ. ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಟಿಕಾಯತ್ ಮುಖಕ್ಕೆ ಮಸಿ ಬಳಿಯಲಾಗಿದೆ. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಮೇಲೆ ಹೋರಾಟದಿಂದ ಹಿಂದೆ ಸರಿಯಲು ಡೀಲ್ ಮಾಡಿದ್ದಾರೆಂಬ ಗಂಭೀರ ಆರೋಪವೊಂದು ಕೇಳಿ ಬಂದಿತ್ತು‌. ಪತ್ರಿಕಾಗೋಷ್ಠಿಯಲ್ಲಿ ರಾಕೇಶ್ ಟಿಕಾಯತ್ ಅವರು ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಸಮರ್ಥಿಸಿಕೊಳ್ಳಲು ಯತ್ನಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಆಕ್ರೋಶಗೊಂಡ ಕೆಲ ಕಾರ್ಯಕರ್ತರು ಟಿಕಾಯತ್ ಮುಖಕ್ಕೆ ಮಸಿ ಬಳಿದಿದ್ದಾರೆ. ಕೂಡಲೇ ಟಿಕಾಯತ್ ಪರ ಕಾರ್ಯಕರ್ತರು ಹಾಗೂ ಇತರ ಕಾರ್ಯಕರ್ತರು ಕುರ್ಚಿಗಳಿಂದ ಬಡಿದಾಡಿಕೊಂಡಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.

Edited By : Shivu K
PublicNext

PublicNext

30/05/2022 02:09 pm

Cinque Terre

35.66 K

Cinque Terre

1

ಸಂಬಂಧಿತ ಸುದ್ದಿ