ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶೀಘ್ರದಲ್ಲೇ ಕಾಂಗ್ರೆಸ್‌ಗೆ ಮತ್ತೊಂದು ಆಘಾತ.!- ಎಂಆರ್ ಸೀತಾರಾಮ್, ರಕ್ಷಾ ರಾಮಯ್ಯ ಸಂಧಾನ ವಿಫಲ

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಮನವೊಲಿಕೆಗೆ ಬಗ್ಗದ ಮಾಜಿ ಸಚಿವ ಎಂ.ಆರ್ ಸೀತಾರಾಮ್ ಶೀಘ್ರವೇ ಅಂದರೆ 2023ರ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ತಮ್ಮ ಪುತ್ರ ರಕ್ಷಾ ರಾಮಯ್ಯ ಜೊತೆ ಕಾಂಗ್ರೆಸ್‌ಗೆ ಗುಡ್ ಬೈ ಹೇಳುವ ಸಾಧ್ಯತೆಗಳು ದಟ್ಟವಾಗಿವೆ.

ಕಾಂಗ್ರೆಸ್‌ ಹೈಕಮಾಂಡ್ ಎಂ.ಆರ್ ಸೀತಾರಾಮ್ ಅವರ ಮನವೊಲಿಸಲು ಅವರ ಪುತ್ರ ರಕ್ಷಾ ರಾಮಯ್ಯ ಅವರನ್ನು ಇಂಡಿಯನ್ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಿದೆ. ಆದರೆ ಸೀತಾರಾಮ್ ಮಾತ್ರ ಕಾಂಗ್ರೆಸ್‌ ತೊರೆಯಲು ಸಕಲ ಸಿದ್ಧತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ವಿಧಾನಸಭೆಯಿಂದ ಪರಿಷತ್ ನಾಮ ನಿರ್ದೇಶನ ಮಾಡಲು ಎಂ ಆರ್ ಸೀತಾರಾಂ ಅವರನ್ನು ಪರಿಗಣಿಸದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಪಕ್ಷವು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಮತ್ತು ವಕ್ತಾರ ನಜರಾಜು ಯಾದವ್ ಅವರನ್ನು ಆಯ್ಕೆ ಮಾಡಿರುವುದು ಸೀತಾರಾಮ್ ಅವರ ಕಣ್ಣು ಕೆಂಪಾಗಿಸಿದೆ.

ಸೀತಾರಾಮ್ ಅವರನ್ನು ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಗ್ರಹಿಸಿದ ಕಾಂಗ್ರೆಸ್, ಜೂನ್ 3ರಂದು ರಕ್ಷಾ ಅವರನ್ನು ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ನೇಮಿಸುವ ಮೂಲಕ ಆಡಳಿತ ಪಕ್ಷ ಬಿಜೆಪಿಗೆ ಚೆಕ್ ಮೇಟ್ ಮಾಡಲು ಪ್ರಯತ್ನಿಸಿತು. ಆದರೆ ಎಂಆರ್ ಸೀತಾರಾಮ್ ಅದ್ಯಾವುದಕ್ಕೂ ಸೊಪ್ಪು ಹಾಕಲಿಲ್ಲ.

2023ರ ವಿಧಾನಸಭಾ ಚುನಾವಣೆಯಲ್ಲಿ ಮಲ್ಲೇಶ್ವರಂನಿಂದ ಸ್ಪರ್ಧಿಸುವಂತೆ ಪಕ್ಷವು ಅವರನ್ನು ಮನವೊಲಿಸಲು ಪ್ರಯತ್ನಿಸಿದರೂ, ಅವರು ಆ ಪ್ರಸ್ತಾಪವನ್ನು ಸ್ವೀಕರಿಸಲು ಸಿದ್ಧರಿಲ್ಲ. ಅಷ್ಟೇ ಅಲ್ಲದೆ ಜೂನ್ 24 ರಂದು ಅರಮನೆ ಮೈದಾನದಲ್ಲಿ ತಮ್ಮ ಬೆಂಬಲಿಗರ ಸಮಾವೇಶವನ್ನು ಆಯೋಜಿಸುವ ಮೂಲಕ ಎಂಆರ್ ಸೀತಾರಾಮ್ ಕಾಂಗ್ರೆಸ್ ಲೆಕ್ಕಾಚಾರವನ್ನು ಬುಡಮೇಲು ಮಾಡಲು ಯೋಜಿಸುತ್ತಿದ್ದಾರೆ ಎನ್ನಲಾಗುತ್ತಿದೆ.

Edited By : Vijay Kumar
PublicNext

PublicNext

16/06/2022 11:46 am

Cinque Terre

13.52 K

Cinque Terre

1

ಸಂಬಂಧಿತ ಸುದ್ದಿ