ಬೆಂಗಳೂರು : ಕೇಂದ್ರ ಸರ್ಕಾರದ ವಿರುದ್ಧ ಈ ಹಿಂದೆ ಕಾಂಗ್ರೆಸ್ ಆರೋಪ ಮಾಡಿತ್ತು. ಈಗ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ನ್ಯಾಷನಲ್ ಹೆರಾಲ್ಡ್ ಅವ್ಯವಹಾರ ಪ್ರಕರಣ ಮುಚ್ಚಿಹೋಗಿದ್ದ ಪ್ರಕರಣ ಮತ್ತೆ ಓಪನ್ ಮಾಡಿ ರಾಹುಲ್ ಗಾಂಧಿಗೆ ಕೆಟ್ಟ ಹೆಸರು ತರಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಕಾಂಗ್ರೆಸ್ ಪಾಳ್ಯ ಕಿಡಿಕಾರುತ್ತಿದ್ದಾರೆ.
ED ಅಧಿಕಾರಿಗಳು ರಾಹುಲ್ ಗಾಂಧಿಯನ್ನು ವಿಚಾರಣೆಗೆ ಕರೆಯುತ್ತಿದ್ದಂತೆ ಕಾಂಗ್ರೆಸ್ ಪಾಳ್ಯ ಕೇಂದ್ರ ಸರ್ಕಾರದ ವಿರುದ್ಧ ಹೊತ್ತಿ ಉರಿದಿತ್ತು. ಕರ್ನಾಟಕದಲ್ಲಿ ಕೂಡ ಕಾಂಗ್ರೆಸ್ ಕಾರ್ಯಕರ್ತರು ರಸ್ತೆಗಿಳಿದು ಪ್ರತಿಭಟನೆ ಮಾಡಿದರು.
ಈ ವೇಳೆ ಪೊಲೀಸರು ರಸ್ತೆಗಿಳಿದು ಪ್ರತಿಭಟನೆ ಮಾಡಿದ ಕಾಂಗ್ರೆಸ್ ಶಾಸಕರನ್ನು ಬಂಧಿಸಿ ಪ್ರತಿಭಟನೆಯನ್ನು ನಿಲ್ಲಿಸಿದರು. ಕೇಂದ್ರ ಸರ್ಕಾರದ ನಡೆ ಮತ್ತು ಡೆಲ್ಲಿ ಪೊಲೀಸರ ದೌರ್ಜನ್ಯದ ಬಗ್ಗೆ ಶಾಸಕಿ ಸೌಮ್ಯ ರೆಡ್ಡಿ ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿ ಪೊಲೀಸರು ಮತ್ತು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
ನವೀನ್ ಪಬ್ಲಿಕ್ ನೆಕ್ಸ್ಟ್ ಬೆಂಗಳೂರು.
PublicNext
18/06/2022 04:26 pm